ಬೆಂಗಳೂರು: ಚಿಕ್ಕೋಡಿಯ ಶ್ರೀ ಸಾಯಿ ಮಂದಿರದಲ್ಲಿ ಜ. 30 ರಂದು ನಡೆಯಲಿರುವ 19ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಪ್ರತಿ ವರ್ಷ ಉಚಿತವಾಗಿ ಬಾಸಿಂಗ ವಿತರಿಸುತ್ತಿರುವ ದಾನಿಗಳಾದ ಸೋಮಶೇಖರ್ ಚಂದ್ರಪ್ಪ ಹೋರಕೇರಿ ಅವರು ಈ ವರ್ಷವೂ 35 ಜೋಡಿ ಬಾಸಿಂಗಗಳನ್ನು ಕೊಡುಗೆಯಾಗಿ ನೀಡಿದರು.
ಈ ಬಾಸಿಂಗಗಳನ್ನು ದಿನಾಂಕ 24-01-2026 ರಂದು ಯಮಕನಮರಡಿಯ ವಿದ್ಯಾವರ್ಧಕ ಸಂಘದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಮುಖಂಡರಾದ ರವೀಂದ್ರ ಹಂಜಿ ಅವರ ಅಮೃತ ಹಸ್ತದಿಂದ ಪೂಜೆ ನೆರವೇರಿಸಿ ಚಿಕ್ಕೋಡಿಯ ಶ್ರೀ ಸಾಯಿ ಮಂದಿರಕ್ಕೆ ಕಳುಹಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ-ಶಿಕ್ಷಕಿಯರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದು ದಾನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


