ಉಡುಪಿ: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ ಪೂಜಾ ಕೈಂಕರ್ಯ ಮತ್ತು ಸರ್ವಜ್ಞ ಪೀಠವೇರಿದ ಅತ್ಯಂತ ಕಿರಿಯ ಯತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಸುಕಿನ ಜಾವ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಜೋಡುಕಟ್ಟೆಯಿಂದ ಆಗಮಿಸಿದ ಪರ್ಯಾಯ ಮೆರವಣಿಗೆ ಅದ್ಭುತ ಸಂಭ್ರಮದ ಕ್ಷಣಗಳಿಗೆ ಸಾಕಗಷಿಯಾಯಿತು.
ಇದಕ್ಕೂ ಮುನ್ನ ವೇದವರ್ಧನ ತೀರ್ಥರು ದಂಡತೀರ್ಥದಲ್ಲಿ ಪುಣ್ಯಸ್ನಾನಗೈದು ಜೋಡುಕಟ್ಟೆಗೆ ಆಗಮಿಸಿದರು. ಬಳಿಕ ಮೆರವಣಿಗೆಯಲ್ಲಿ ಸಾಗಿಬಂದು ಮೊದಲಿಗೆ ಕನಕ ನಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನ ಪಡೆದರು. ಬಳಿಕ ಪುತ್ತಿಗೆ ಶ್ರೀಗಳು ಶೀರೂರು ಶ್ರೀಗಳನ್ನು ಬರಮಾಡಿಕೊಂಡು ಅಕ್ಷಯ ಸೌಟು ಮತ್ತು ಮಠದ ಕೀಲಿಕೈ ಹಸ್ತಾಂತರಿಸಿದರು. ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದ ಯತಿಗಳು ಅರಳು ಗದ್ದಿಗೆ ಸಾಂಪ್ರದಾಯಿಕ ದರ್ಬಾರ್ ನಲ್ಲಿ ಪಾಲ್ಗೊಂಡರು.
ಸರ್ವಜ್ಞ ಪೀಠವೇರಿದ ವೇದವರ್ಧನ ತೀರ್ಥರ ಜೊತೆಗೆ ಕೃಷ್ಣಾಪುರ, ಪಲಿಮಾರು, ಪೇಜಾವರ, ಕಾಣಿಯೂರು, ಸೋದೆ, ಅದಮಾರು ಶ್ರೀಗಳು ಭಾಗಿಯಾದರು.
ರಾಜಾಂಗಣದಲ್ಲಿ ನಡೆದ ದರ್ಬಾರ್ ನಲ್ಲಿ ದೇಶದ ವಿವಿಧ ಭಾಗಗಳ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಮೈಸೂರು ಮಹಾರಾಜ ಸಂಸದ ಯದುವೀರ ದತ್ತ ಒಡೆಯರ್ ಭಾಗಿಯಾಗಿದ್ದರು.
ದರ್ಬಾರ್ ಮುಗಿದ ಬಳಿಕ ಶೀರೂರು ಶ್ರೀಗಳು ತನ್ನ ಪ್ರಥಮ ಪರ್ಯಾಯದ ಮೊದಲ ಕೃಷ್ಣ ಪೂಜೆ ನೆರವೇರಿಸಿದರು. ಈ ಬಾರಿಯ ಹಿಂದಿನ ಪರ್ಯಾಯಗಳಿಗಿಂತಲೂ ಅಧಿಕ ಸಂಖ್ಯೆಯ ಭಕ್ತರ ಉಪಸ್ಥಿತಿಗೆ ಸಾಕ್ಷಿಯಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


