ಕ್ರೀಡೆಯಿಂದ ಒತ್ತಡ ನಿವಾರಣೆ ಸಾಧ್ಯ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

Upayuktha
0


ಮಂಗಳೂರು: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ಭಾನುವಾರ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.


ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕೆ.ಪಿ.ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಶುಭ ಹಾರೈಸಿದರು.


ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್  ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ.ಪೂಜಾರಿ, ಉಪಾಧ್ಯಕ್ಷ ವಿಲ್ಫ್ರೆಡ್ ಡಿಸೋಜಾ ಉಪಸ್ಥಿತರಿದ್ದರು.


ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top