ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯವರು ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಪುತ್ತೂರಿನ ಸುದಾನ ವಸತಿಶಾಲೆಯ 14 ವಿದ್ಯಾರ್ಥಿಗಳು ಲೋವರ್ ಹಾಗೂ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಭಾಗವಹಿಸಿದ್ದು, ಇದರಲ್ಲಿ 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿಯೂ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿಯೂ ಉತ್ತೀರ್ಣರಾಗಿ ಶೇ. 100 ಫಲಿತಾಂಶವನ್ನು ದಾಖಲಿಸಿದ್ದಾರೆ.
ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದವರು ಒಂಭತ್ತನೇ ತರಗತಿಯ ವಿದ್ಯಾರ್ಥಿಗಳಾದ ದೇವಮುರಾರಿ ಗುಂಜನ್ ಆರ್, ನವನೀತ್ ವೈ ಕೆ ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಅನಘ, ಚರೀಷ್ಮಾ ಕೆ, ಲಹರಿ ಕೆ ಒ, ಲಿಪಿಕಾ ಆರ್ ಕೆ, ಶಮಿತಾ ಎಂ, ಶರ್ಮಿಳಾ ಕೆ. ಹಾಗೂ ಪ್ರಥಮ ಶ್ರೇಣಿಯಲ್ಲಿ ಎಂಟನೇ ತರಗತಿಯ ಮಾನ್ವಿ ಡಿ ಹಾಗೂ ಕ್ರಿಸ್ ರಿಯೋನ್ ಲಸ್ರಡೊ, ಹೃತ್ವೀಕ ಆರ್ ನಾಯ್ಕ್ ಕೆ, ಕೌಶಿಕ್ ಎಸ್, ಎಂ. ಪ್ರಣವ್, ತನ್ವಿ ಪಿ ಆರ್ ಉತ್ತೀರ್ಣರಾಗಿದ್ದಾರೆ.
ಉತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳನ್ನು ಸುದಾನ ಶಾಲೆಯ ಚಿತ್ರಕಲಾ ಶಿಕ್ಷಕ ಸದಾಶಿವ ಭಟ್ ಮಾರ್ಗದರ್ಶನ ನೀಡಿದ್ದು, ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶೋಭಾ ನಾಗರಾಜ್‌ರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


