ಸುರತ್ಕಲ್: ಸುರತ್ಕಲ್‌ನ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಸಂದೇಶ ಪ್ರಶಸ್ತಿ ಪುರಸ್ಕೃತರಾದ ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ವಿಕಿಸೋರ್ಸ್ ಹಾಗೂ ವಿಕಿಪೀಡಿಯಾದ ಕನ್ನಡ–ತುಳು ಭಾಷಾ ಸಮೂಹ ಬಳಗವು, ವಿಕಿಸೋರ್ಸ್‌ಗೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ಹಿನ್ನೆಲೆಯಲ್ಲಿ ಡಾ. ಇಂದಿರಾ ಹೆಗ್ಗಡೆ ಅವರಿಗೆ ಕೃತಜ್ಞತಾ ಪ್ರಮಾಣ ಪತ್ರ ನೀಡಿ ಗೌರವಿಸಿತು.
ಮಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕಿ ಕವಿತಾ ಗಣೇಶ್ ಮಾತನಾಡಿ, 2023ರ ಸೆಪ್ಟೆಂಬರ್‌ನಲ್ಲಿ ಗೋವಿಂದ ದಾಸ ಕಾಲೇಜಿನಲ್ಲಿ ಸಾಹಿತಿಗಳ ಅನುಮತಿಯೊಂದಿಗೆ ಅವರ ಕೃತಿಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯದ ತರಬೇತಿ ಪಡೆದು, ಇದೀಗ ಕನ್ನಡ ವಿಕಿಸೋರ್ಸ್ ಜೊತೆಗೆ ತುಳು ವಿಕಿಸೋರ್ಸ್ ಆರಂಭಿಸಲಾಗಿದೆ ಎಂದು ತಿಳಿಸಿದರು. ಪ್ರಸ್ತುತ ತುಳು ವಿಕಿಸೋರ್ಸ್‌ನಲ್ಲಿ 12 ಲೇಖಕರ 101 ಪುಸ್ತಕಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದ್ದು, ಈ ಕಾರ್ಯಕ್ಕೆ ಲೇಖಕರ ಸಹಕಾರ ಅತ್ಯವಶ್ಯಕ ಎಂದು ಹೇಳಿದರು.
ಕೆನರಾ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಬಬಿತಾ ಶೆಟ್ಟಿ ವಿಕಿಸೋರ್ಸ್‌ನ ವಿವಿಧ ದಾಖಲೀಕರಣ ಯೋಜನೆಗಳ ಕುರಿತು ಮಾಹಿತಿ ನೀಡಿದರು. ವಿಕಿಪೀಡಿಯ ತರಬೇತುದಾರ ಬೆನೆಟ್ ಅಮ್ಮಣ್ಣ ಕಣ್ಮರೆಯಾಗುತ್ತಿರುವ ಮಾಹಿತಿಗಳನ್ನು ಉಳಿಸಿ ದಾಖಲಿಸುವ ಅಗತ್ಯದ ಬಗ್ಗೆ ವಿವರಿಸಿದರು.
ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ತುಳುನಾಡಿನ ಇತಿಹಾಸ ಮತ್ತು ಸಂಸ್ಕೃತಿಯ ಸಂಶೋಧನಾ ಸಾಧ್ಯತೆಗಳ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಕೃಷ್ಣಮೂರ್ತಿ ವಹಿಸಿದ್ದರು. ಕೋಶಾಧಿಕಾರಿ ಡಾ. ಜ್ಯೋತಿ ಚೇಲೈರು ವಂದಿಸಿದರು. ಸದಸ್ಯೆ ಸುಜಾತ, ಟಿವಿ ನಿರೂಪಕ ಪ್ರಕಾಶ್ ಪುತ್ತೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


