ಹುಬ್ಬಳ್ಳಿ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಶಿಕ್ಷಕಿ ಕುಮಾರಿ ರೂಪಾ ಬಿ. ನಾಟೀಕಾರ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಹಾಗೂ ಸಮಾಜಮುಖಿ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಶಿಕ್ಷಣ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ ಗೂ ಸಮಾಜಮುಖಿ ಸೇವಾ ಸಂಘ (ರಿ) ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಫೆಬ್ರವರಿ 1, 2026 ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಕವನ ಸಂಕಲನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಕೊಡುಗೆಯನ್ನು ಪರಿಗಣಿಸಿ ಕುಮಾರಿ ರೂಪಾ ಬಿ. ನಾಟೀಕಾರ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಮುದ್ದೇಬಿಹಾಳ ತಾಲೂಕಿನಲ್ಲಿರುವ ಅವರು ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ, ನೈತಿಕ ಮೌಲ್ಯಗಳ ಬೆಳೆವಣಿಗೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಪ್ರಶಸ್ತಿ ಆಯ್ಕೆ ಸಮಿತಿಯ ಗಮನ ಸೆಳೆದಿದೆ.
ಪ್ರಶಸ್ತಿಯನ್ನು ನಾಡಿನ ಹೆಸರಾಂತ ಸ್ವಾಮೀಜಿಗಳು ಹಾಗೂ ಗಣ್ಯರು ಅಮೃತ ಹಸ್ತದಿಂದ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮವು ಹುಬ್ಬಳ್ಳಿಯ ಸಿ.ಬಿ.ಟಿ. ಬಸ್ ನಿಲ್ದಾಣದ ಎರಡನೇ ಮಹಡಿಯ ಕಾಂಪ್ಲೆಕ್ಸ್ ಇವೆಂಟ್ ಎ.ಸಿ. ಹಾಲ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಶ್ರೀನಿಧಿ ಫೌಂಡೇಶನ್ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಂ. ಶಿವಪ್ಪನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದ ಗಣ್ಯರು, ಸಹ ಶಿಕ್ಷಕರು ಹಾಗೂ ಸಾರ್ವಜನಿಕ ವಲಯದಿಂದ ಕುಮಾರಿ ರೂಪಾ ಬಿ. ನಾಟೀಕಾರ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


