ತೆಂಕನಿಡಿಯೂರು ಕಾಲೇಜು: ಮತದಾರ ಜಾಗೃತಿ ಜಾಥಾ

Upayuktha
0

 


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಮೈ ಭಾರತ್ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 25 ರ ಮತದಾರ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ, ಮತದಾರ ಪ್ರತಿಜ್ಞಾವಿಧಿ ಬೋಧನೆ ಹಾಗೂ ಮತದಾರ ಜಾಗೃತಿ ಜಾಥ ಆಯೋಜಿಸಲಾಯಿತು.


ಯುವಜನತೆ ಮತ್ತು ಮತದಾನ ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದ ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕ ಪ್ರಶಾಂತ್ ನೀಲಾವರ "ಯುವಜನತೆ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಅರ್ಥಪೂರ್ಣವಾಗಿ ಮತ ಚಲಾಯಿಸಿದಲ್ಲಿ ಮಾತ್ರ ನಮ್ಮ ಪ್ರಜಾಪ್ರಭುತ್ವ ಯಶಸ್ವಿಯಾಗಬಲ್ಲದು, ಯುವಜನತೆಯ ನಿರ್ಲಿಪ್ತತೆ ನಿಜಕ್ಕೂ ಕಳವಳಕಾರಿ" ಎಂದರು. 


ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ ಮತದಾರ ಪ್ರತಿಜ್ಞಾ ವಿಧಿ ಬೋಧಿಸಿದರು, ಇದೆ ಸಂದರ್ಭದಲ್ಲಿ ಮೈ ಭಾರತ್ ಉಡುಪಿ ಜಿಲ್ಲಾ ಯುವ ಸಮನ್ವಯಾಧಿಕಾರಿ ಉಲ್ಲಾಸ್ ಕೆ.ಟಿ..ಕೆನೂತನ ಮತದಾರ ನೊಂದಣಿ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ನೂತನ ಮತದಾರರನ್ನು ಅಭಿನಂದಿಸಿದರು.ಕಾಲೇಜಿನ ಐಕ್ಯುಎಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ಶೈಕ್ಷಣಿಕ ಸಲಹೆಗಾರರಾದ ಡಾ. ಶ್ರೀಧರ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಂದೇಶ್, ಬೋಧಕ-ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ನಂತರದಲ್ಲಿ ಮತದಾರಜಾಗೃತಿ ಘೋಷಣಾ ಫಲಕಗಳೊಂದಿಗೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಿಲ್ಲಾ ಪಾದಯಾತ್ರೆಯ ಮೂಲಕ ಮತದಾರ ಜಾಗೃತಿ ಮೂಡಿಸಿದರು. ಜಾಥಾದಲ್ಲಿ ಎನ್. ಎಸ್. ಎಸ್., ಯುವ ರೆಡ್ ಕ್ರಾಸ್ ಹಾಗೂ ರೋವರ್ -ರೇಂಜರ್ ಸ್ವಯಂ ಸೇವಕರೂ ಭಾಗಿಯಾದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top