ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಇತ್ತೀಚೆಗೆ ನಿಧನರಾದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯ ಹೆಗ್ಡೆಯವರಿಗೆ ಶ್ರದ್ದಾಂಜಲಿ ಸಭೆ ಮತ್ತು ಪ್ರಾರ್ಥನಾ ಸಭೆ ಜ. 9 ರಂದು ಶುಕ್ರವಾರ ಸಂಜೆ 5 ಗಂಟೆಗೆ ಬಂಟ್ಸ್ ಹಾಸ್ಟೇಲ್ ಶ್ರೀ ರಾಮಕೃಷ್ಣ ಕಾಲೇಜು ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.
ಡಾ ವಿನಯ ಹೆಗ್ಡೆ ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞರು. ನಿಟ್ಟೆ ಯೂನಿವರ್ಸಿಟಿ ರೂವಾರಿಯಾಗಿದ್ದ ಅವರು ದಕ್ಷ ಆಡಳಿತಗಾರರಾಗಿದ್ದರು. ಅವರಿಗೆ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


