ಉಡುಪಿ: ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ನಿಮಿತ್ತ ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾನುವಾರ ರಾತ್ರಿ ಖ್ಯಾತ ಗಾಯಕ ಚೆನ್ನೈನ ಸಂದೀಪ್ ನಾರಾಯಣ್ ಅವರು 'ಕರ್ನಾಟಿಕ್ ವೋಕಲ್ ಕನ್ಸರ್ಟ್' ಸಂಗೀತ ಕಛೇರಿ ನಡೆಸಿದರು.
ವಯೋಲಿನ್‌ನಲ್ಲಿ ಡಾ. ನಿಶಾಂತ್ ಚಂದ್ರನ್, ಮೃದಂಗದಲ್ಲಿ ತುಮಕೂರು ಬಿ. ರವಿಶಂಕರ್, ಖಂಜಿರಾದಲ್ಲಿ ಗುರು ಪ್ರಸನ್ನ ಬೆಂಗಳೂರು ವಾದ್ಯ ಸಹಕಾರ ನೀಡಿದರು.
ವಿದ್ವಾನ್ ಪ್ರೊ. ಎಂ.ಎಲ್. ಸಾಮಗ ಎಲ್ಲ ಕಲಾವಿದರನ್ನು ಶ್ರೀಕೃಷ್ಣ ಮಠದ ಪರವಾಗಿ ಸ್ವಾಗತಿಸಿ, ಪ್ರೇಕ್ಷಕರಿಗೆ ಪರಿಚಯಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಪರ್ಯಾಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರು ಎಲ್ಲ ಕಲಾವಿದರಿಗೆ ಅನುಗ್ರಹ ಮಂತ್ರಾಕ್ಷತೆಯೊಂದಿಗೆ ಕೃಷ್ಣನ ಮೂರ್ತಿಯನ್ನು ನೀಡಿ ಗೌರವಿಸಿದರು. ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ಇದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


