ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜು: ಎನ್‌ಎಸ್‌ಎಸ್‌ ವಾರ್ಷಿಕ ಚಟುವಟಿಕೆಗಳ ಸಮಾರೋಪ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ  2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ಹಿರಿಯ ಸ್ವಯಂ ಸೇವಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾಲೇಜಿನ ಗ್ರಂಥಪಾಲಕರಾದ ಮನೋಹರ್ ಶೆಟ್ಟಿ ಮಾತನಾಡಿ, "ತರಗತಿಯ ನಾಲ್ಕು ಗೋಡೆಗಳ ಮಧ್ಯೆ ಕಲಿಸಲಾಗದ್ದನ್ನು ಎನ್ ಎಸ್ ಎಸ್ ಕಲಿಸುತ್ತದೆ. ಎನ್ ಎಸ್ ಎಸ್ ಸ್ವಯಂ ಸೇವಕರಾಗಿ ನೀವು ಪಡೆದುಕೊಂಡ ಅನುಭವಗಳು ನಿಮ್ಮ ಮುಂದಿನ ಜೀವನಕ್ಕೆ, ವೃತ್ತಿಗೆ ದಾರಿದೀಪವಾಗಲಿ. ಎನ್ ಎಸ್ ಎಸ್ ಆಶಯಗಳಿಗೆ ಎಂದೆಂದಿಗೂ ಬದ್ಧರಾಗಿ ಸ್ವಸ್ಥ ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಿ" ಎಂದು ಹೇಳಿದರು.



ಅಧ್ಯಕ್ಷತೆ ವಹಿಸಿ ಸಮಾರೋಪ ಭಾಷಣ ಮಾಡಿದ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ "ಎನ್‌ಎಸ್‌ಎಸ್‌ನಿಂದ ಮಾಡುವ ಯಾವುದೇ ಕೆಲಸವು ಸೇವೆ ಎಂಬ ನೆಲೆಯಲ್ಲಿ ರೂಪು ಗೊಳ್ಳುತ್ತದೆ. ಎನ್ ಎಸ್ ಎಸ್ ಮೂಲಕ ಅದೆಷ್ಟೋ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಸಮಾಜದೊಂದಿಗೆ ಬೆರೆತು ಹೇಗೆ ಬದುಕಬೇಕೆಂಬ ಪಾಠ ಎನ್ ಎಸ್ ಎಸ್ ಕಲಿಸಿ ಕೊಡುತ್ತದೆ. ಇದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ" ಎಂದು ಹೇಳಿದರು.

   


ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ, ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ, ಎನ್ ಎಸ್ ಎಸ್ ಘಟಕದ ನಾಯಕಿ ರಾಶಿಕ, ನಾಯಕ ಸಂಕೇತ್ ಉಪಸ್ಥಿತರಿದ್ದರು.


ನಾಯಕಿ ರಾಶಿಕ ವಾರ್ಷಿಕ ಚಟುವಟಿಕೆಗಳ ವರದಿ ವಾಚಿಸಿದರು. ಇದೇ ಸಂದರ್ಭ ಸ್ವಯಂ ಸೇವಕರಿಗೆ ಪ್ರಮಾಣ ಪತ್ರ ನೀಡಲಾಯಿತು. ಹಿರಿಯ ಸ್ವಯಂ ಸೇವಕರಿಗೆ ನೆನಪಿನ ಕಾಣಿಕೆ ನೀಡಲಾಯಿತು.


ಸ್ವಯಂ ಸೇವಕಿ ಮಾನ್ವಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಅಪೇಕ್ಷಾ ಸ್ವಾಗತಿಸಿ ನಾಯಕ ಸಂಕೇತ್ ಧನ್ಯವಾದವಿತ್ತರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top