- ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಪೂಜ್ಯ ವೇದವರ್ಧನ ತೀರ್ಥ ಶ್ರೀಪಾದರ ಪಾದಪೂಜೆ ನೆರವೇರಿಸಲಾಯಿತು.
- ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಉಜಿರೆ: ಉಡುಪಿಯಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಮೂಲತಃ ಪೂರ್ವಾಶ್ರಮದಲ್ಲಿ ನಿಡ್ಲೆ ನಿವಾಸಿಯಾದ ಶೀರೂರು ಮಠದ ಪೂಜ್ಯ ವೇದವರ್ಧನತೀರ್ಥ ಶ್ರೀಪಾದರು ಶುಕ್ರವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು.
ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು. ಸ್ವಾಮೀಜಿಯವರು ದೇವರದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ ಬಳಿಕ ಉಜಿರೆಗೆ ಪ್ರಯಾಣ ಮುಂದುವರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


