ವಿನಯ ಹೆಗ್ಡೆ ಅವರ ಆದರ್ಶ ಸಮಾಜಕ್ಕೆ ಪ್ರೇರಣಾದಾಯಿ: ಸಿಎ ಶಾಂತಾರಾಮ ಶೆಟ್ಟಿ

Upayuktha
0


ಮಂಗಳೂರು: ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ವಿನಯ ಹೆಗ್ಡೆ ಅವರ ಆದರ್ಶಯುತ ಬದುಕು ಸಮಾಜಕ್ಕೆ ಸದಾ ಪ್ರೇರಣಾದಾಯಿ. ಸಾಧನೆಯ ಜತೆಗೆ ತನ್ನ ಸರಳ ನಡವಳಿಕೆಯಿಂದ ಅವರು ಜನಮಾನಸದಲ್ಲಿ ಗೌರವದ ಸ್ಥಾನ ಪಡೆದಿದ್ದಾರೆ ಎಂದು ದ.ಕ. ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.


ಇತ್ತೀಚೆಗೆ ಅಗಲಿದ ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ನಿಟ್ಟೆ ವಿನಯ ಹೆಗ್ಡೆ ಅವರಿಗೆ ದ.ಕ. ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿದರು.


ದ.ಕ. ಜಿಲ್ಲಾ ರೆಡ್ ಕ್ರಾಸ್ ನ ಸಮಾಜ ಸೇವಾ ಕಾರ್ಯಗಳಿಗೆ ವಿನಯ ಹೆಗ್ಡೆ ಅವರು ನೀಡಿದ ಪ್ರೋತ್ಸಾಹ ಸದಾ ಸ್ಮರಣೀಯ ಎಂದು ಅವರು ಹೇಳಿದರು.

ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ದ.ಕ.ಜಿಲ್ಲಾ ರೆಡ್ ಕ್ರಾಸ್ ಸಮಿತಿಯ ಉಪಾಧ್ಯಕ್ಷ ಡಾ. ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ನಿರ್ದೇಶಕರಾದ ಡಾ.ಸುಮನಾ .ಬಿ., ಪಿ.ಬಿ.ಹರೀಶ್ ರೈ ನುಡಿ ನಮನ ಸಲ್ಲಿಸಿದರು.


ನಿಟ್ಟೆ ಪರಿಗಣಿತ ವಿ.ವಿ.ಯ ಯೂತ್ ರೆಡ್ ಕ್ರಾಸ್ ನ ನೋಡಲ್ ಅಧಿಕಾರಿ ಡಾ. ಶಂತನು ಸಹ, ರೆಡ್ ಕ್ರಾಸ್ ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕ ಗುರುದತ್ ನಾಯಕ್, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top