ವಿಶ್ವ ಗೀತಾ ಪರ್ಯಾಯ ವಿಶೇಷ: ಜ.8ರಂದು ಹೊನ್ನಿನ ಭಗವದ್ಗೀತಾ ಹೊತ್ತಗೆ ಲೋಕಾರ್ಪಣೆ

Upayuktha
0


ಉಡುಪಿ: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ ಭಕ್ತರೋರ್ವರು ಸುಮಾರು 2 ಕೋ.ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ 'ಹೊನ್ನಿನ ಭಗವದ್ಗೀತಾ ಹೊತ್ತಗೆ' ಜ. 8ರಂದು ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.


ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆ (ತಗಡು)ಯಲ್ಲಿ ಅಂದವಾಗಿ ಮುದ್ರಿಸಲಾಗಿದೆ. ಹೊನ್ನಿನ ಭಗವದ್ಗೀತಾ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತಂದು, ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶೀಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಲಾಗುವುದು.


ವಿಶ್ವಹಿಂದೂ ಪರಿಷತ್ ಪ್ರಮುಖರು ಹಾಗೂ ಅಯೋಧ್ಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟ್ ವಿಶ್ವಸ್ಥ ಡಾ.ಅನಿಲ್ ಮಿಶ್ರಾ ಹಾಗೂ ಪಂಢರಾಪುರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಗಹನೀನಾಥ ಜ್ಞಾನೇಶ್ವರ ಮಹಾರಾಜ್ ಔಶೇಕರ್ ಹಾಗೂ ಆಳಂದ ಶ್ರೀ ಜ್ಞಾನೇಶ್ವರ ಮಹಾರಾಜ್ ಪೀಠದ ಪ್ರಧಾನ ಅರ್ಚಕ ಗಿರೀಶ್ ತುಕ್ರಿ ಅಭ್ಯಾಗತರಾಗಿ ಆಗಮಿಸುವರು ಎಂದು ಪರ್ಯಾಯ ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top