- ವಿವೇಕಾನಂದ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ
- 20 ಸಾವಿರ ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಸಮೂಹ ಗಾಯನ
ಪುತ್ತೂರು: ಭಾರತದಆತ್ಮವಾದಧರ್ಮ, ಸಂಸ್ಕೃತಿಯನ್ನು ಜಗತ್ತಿನೆಲ್ಲೆಡೆ ಸಾರಿದ ಮಹಾನುಭಾವರು ಸ್ವಾಮಿ ವಿವೇಕಾನಂದರು. ಧರ್ಮವನ್ನೇ ತಳಹದಿಯಾಗಿರಿಸಿ, ಸಮಾಜ ಸುಧಾರಣೆ ಮಾಡಿದರು. ಅವರ ಕನಸಿನಂತೆ ಇಂದಿನ ತಲೆಮಾರು ಬದಲಾಗುತ್ತಿದೆ. ದೀರ್ಘಕಾಲದ ನಿದ್ದೆಯ ಬಳಿಕ ತಾಯಿ ಭಾರತಿ ಎಚ್ಚೆತ್ತುಕೊಳ್ಳುತ್ತಿದ್ದಾಳೆ. ಭಾರತ ಎಲ್ಲಾ ರಂಗದಲ್ಲೂ ಕೀರ್ತಿ ಪಸರಿಸುತ್ತಿದೆ ಎಂದು ಹಿಂದೂಜಾಗರಣ ವೇದಿಕೆ, ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖ್ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನೆಹರುನಗರದ ವಿವೇಕಾನಂದ ಕಾಲೇಜಿನ ಆವರಣದಲ್ಲಿ ಸೋಮವಾರದಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಭಾರತ ಯಾವತ್ತಿಗೂ ನಾಶಗೊಳ್ಳುವುದಿಲ್ಲ ಎಂಬ ಮೃತ್ಯುಂಜಯ ತತ್ತ್ವವನ್ನು ಜಗತ್ತಿಗೆ ಪರಿಚಯಿಸಿದೆ. ಇವತ್ತಿಗೂ ಭಾರತದ ಅಮರಗಾಥೆ ಸೋಮನಾಥ ಮಂದಿರ ನಮ್ಮೆಲ್ಲರ ಕಣ್ಣೆದುರಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ನೂರು ವರ್ಷ ಪೂರೈಸಿದೆ. ವಂದೇ ಮಾತರಂಗೀತೆ ನೂರೈವತ್ತು ವರ್ಷಗಳಿಂದ ಮೊಳಗುತ್ತಲಿದೆ. ಇದು ಭಾರತದ ಜೀವಂತಿಕೆಗೆ ಸಾಕ್ಷಿಎಂದು ಹೇಳಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಖುದಿರಾಮ್ ಬೋಸ್, ಪ್ರೀತಿಲತಾ ವಡ್ಡೇದಾರ್, ಬಿಪಿನ್ ಚಂದ್ರಪಾಲ್ ಮೊದಲಾದಕಾಂತ್ರಿಕಾರಿ ವೀರರು ಹುಟ್ಟಿರಾಷ್ಟ್ರದ ಮುಕ್ತಿಗಾಗಿ ಜೀವ ಬಲಿದಾನ ಮಾಡಿದ್ದಾರೆ. ಇವರಿಗೆಲ್ಲರಿಗೂ ಸ್ವಾಮಿ ವಿವೇಕಾನಂದರು ಪ್ರೇರಣೆಯಾಗಿದ್ದರು. ವಿವೇಕಾನಂದರ ಸಾಹಿತ್ಯ ಭಾರತೀಯರಿಗೆ ಸ್ಫೂರ್ತಿಯ ಮೂಲವಾಗಿದೆ ಎಂದು ಆಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಜಗತ್ತು ಗೆಲ್ಲಲ್ಲು ಅನೇಕ ಮಂದಿ ಪ್ರಯತ್ನಿಸಿದ್ದಾರೆ. ಆದರೆ ಒಂದು ಬಿಂದುರಕ್ತ ನೆಲಕ್ಕೆ ಚೆಲ್ಲದೆ, ರಕ್ತಕ್ಕೆರಕ್ತ ಜೋಡಿಸಿದವರು ಸ್ವಾಮಿ ವಿವೇಕಾನಂದರು. ದೇಶಭಕ್ತಿಯೆಂಬ ವ್ರತದಿಂದ ಭಾರತದ ಆಧ್ಯಾತ್ಮಿಕಚಿಂತನೆ ವಿಶ್ವದೆಲ್ಲೆಡೆ ಪಸರಿಸಿದರು ಎಂದರು.
ಬ್ರಿಟೀಷರ ಬಂಧನವನ್ನುತಪ್ಪಿಸಲು ಭಾರತದಲ್ಲಿ ಸಾವಿರಾರು ಹೋರಾಟಗಾರರು ಹುಟ್ಟಿದರು. ದೇಶಕ್ಕಾಗಿ ಹೋರಾಡಿ, ತಮ್ಮ ಉಸಿರನ್ನು ಅರ್ಪಣೆ ಮಾಡಲು ವಂದೇ ಮಾತರಂ ಹಾಡು ಅವರಿಗೆಲ್ಲ ಪ್ರೇರಣೆಯಾಯಿತು. ಆದರೆ ಆ ಹಾಡಿಗೆ ಭಾವತುಂಬಲು, ವಿವೇಕಾನಂದರ ನುಡಿಗಳೇ ಮೂಲವಾಗಿದ್ದವು. ಅಂದಿನಿಂದ ಇಂದಿನವರೆಗೆ ಸಮಾಜದಲ್ಲಿ ವಿವೇಕಾನಂದರ ತತ್ತ್ವಗಳು ಉಸಿರಾಡುತ್ತಿದೆ ಎಂದು ನುಡಿದರು.
ಸಭಾಕಾರ್ಯಕ್ರಮದ ನಂತರ, ಸಂಘ ಶತಾಬ್ಧಿ ಪರಿಕಲ್ಪನೆಯಲ್ಲಿ, ಸಂಘ ಬೆಳೆದು ಬಂದ ಹಾದಿಯಕುರಿತಾಗಿ ವಿವೇಕಾನಂದ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪಾಧ್ಯಕ್ಷ ಸತೀಶರಾವ್ ವಂದಿಸಿ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕಿ ಉಷಾಕಿರಣ್‍ಎಸ್. ಎನ್. ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ, ವಂದೇ ಮಾತರಂಗೀತೆಯ 150ನೇ ವರ್ಷಾಚರಣೆಯ ಪ್ರಯುಕ್ತ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳು ಹಾಗೂ ಗ್ರಾಮಾಂತರ ಶಾಲೆಗಳ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳು ಸೇರಿಒಟ್ಟುಇಪತ್ತು ಸಾವಿರ ವಿದ್ಯಾರ್ಥಿಗಳು ಏಕ ಕಾಲದಲ್ಲಿ ವಂದೇ ಮಾತರಂ ಮತ್ತುದೇಶ ಭಕ್ತಿಗೀತೆಗಳ ಸಮೂಹ ಗಾಯನದಲ್ಲಿ ಭಾಗಿಯಾದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


