ದರೂರು ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರಕ್ಕೆ ₹8 ಲಕ್ಷ ಮೌಲ್ಯದ ಶಿಲಾ ಬಂಡೆಗಳ ಆಗಮನ

Upayuktha
0


ಬಳ್ಳಾರಿ: ತಾಲ್ಲೂಕಿನ ದರೂರು ಗ್ರಾಮದ ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರಕ್ಕೆ ಚಿಕ್ಕಬಳ್ಳಾಪುರದಿಂದ ₹8,00,000 ಮೌಲ್ಯದ ಶಿಲಾ ಬಂಡೆಗಳು ಎರಡು ಲಾರಿಗಳ ಮೂಲಕ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಆಗಮಿಸಿವೆ.


ಈ ಸಂದರ್ಭದಲ್ಲಿ ಪುಣ್ಯ ಕ್ಷೇತ್ರದ ಪ್ರಧಾನ ಆರ್ಚಕರು ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಶಿಲಾ ಬಂಡೆಗಳಿಗೆ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ, ನಂತರ ಪುಣ್ಯ ಕ್ಷೇತ್ರದ ಆವರಣದಲ್ಲಿ ಬಂಡೆಗಳನ್ನು ಇಳಿಸಲಾಯಿತು.


ಈಗಾಗಲೇ ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರದಲ್ಲಿ ಸುಮಾರು ₹2 ಕೋಟಿ 50 ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಇನ್ನೂ ₹4 ಕೋಟಿ ಮೌಲ್ಯದ ಕಾಮಗಾರಿಗಳು ಮುಂದುವರೆಯಬೇಕಾಗಿವೆ ಎಂದು ವ್ಯವಸ್ಥಾಪನ ಸಮಿತಿ ತಿಳಿಸಿದೆ.


ಈ ಹಿನ್ನೆಲೆಯಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜೊತೆಗೆ ಆಂಧ್ರಪ್ರದೇಶದ ಕರ್ನೂಲ್ ಹಾಗೂ ಅನಂತಪುರ ಜಿಲ್ಲೆಗಳಲ್ಲಿರುವ ಭಕ್ತಾಧಿಗಳು ಪುಣ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಉದಾರವಾಗಿ ದೇಣಿಗೆ ನೀಡುವಂತೆ ಪುಣ್ಯ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮನವಿ ಮಾಡಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top