ಕಲಾಕುಂಚ ಶಿರ್ಶಿ ಶಾಖೆಯ ಅಧ್ಯಕ್ಷರಾಗಿ ಶ್ರೀಮತಿ ಆಶಾ ಅರುಣ್ ಪೈ ಅಯ್ಕೆ ನೇಮಕ

Upayuktha
0

 


ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಖೆಗಳು ಈಗಾಗಲೇ ಕಾರ್ಯಾರಂಭಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಶಿರ್ಶಿಯ ಶಾಖೆಯ ಅಧ್ಯಕ್ಷರಾಗಿ ಬಹುಮುಖ ಪ್ರತಿಭೆ ಶ್ರೀಮತಿ ಆಶಾ ಅರುಣ್ ಪೈ ಅಯ್ಕೆಯನ್ನು ನೇಮಕ ಮಾಡಲಾಗಿದೆ ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.


ಶಿರ್ಶಿಯ ಕಲಾಕುಂಚ ಶಾಖೆಯ ಉದ್ಘಾಟನೆ ಶೀಘ್ರದಲ್ಲೇ ನಡೆಯಲಿದ್ದು, ಕರಾವಳಿ ಜಿಲ್ಲೆಗಳ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.


ಯಕ್ಷಗಾನ ಸೇರಿದಂತೆ ವಿವಿಧ ಜನಪದ ಹಾಗೂ ಶಾಸ್ತ್ರೀಯ ಕಲಾಪ್ರಕಾರಗಳ ಪ್ರೋತ್ಸಾಹ, ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರಗಳು, ಕಲೆ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಗಳ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುವ ಉದ್ದೇಶವನ್ನು ಕಲಾಕುಂಚ ಶಿರ್ಶಿ ಶಾಖೆ ಹೊಂದಿದೆ ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top