ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಆಳ್ವಾಸ್ ತಂಡಗಳ ಪ್ರಭುತ್ವ

Upayuktha
0

 ವಿನರ್ಸ್ ಮತ್ತು ರನ್ನರ್ಸ್ ಅಪ್ ಪಟ್ಟ ಅಲಂಕಾರ





ಮೂಡುಬಿದಿರೆ: ಕರ್ನಾಟಕ ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಚಾಮರಾಜನಗರ ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜನವರಿ 19 ಮತ್ತು 20ರಂದು ನಡೆಯಿತು. ಈ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ 24 ಮತ್ತು ಬಾಲಕಿಯರ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದವು.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಎರಡು ಬಾಲಕರ ಹಾಗೂ ಎರಡು ಬಾಲಕಿಯರ ತಂಡಗಳು ಸೇರಿ ಒಟ್ಟು ನಾಲ್ಕು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು. ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ನಡೆದ ಪಂದ್ಯಾಟದಲ್ಲಿ ಆಳ್ವಾಸ್ ಬಾಲಕರ ಮತ್ತು ಬಾಲಕಿಯರ ‘ಎ’ ತಂಡಗಳು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರೆ, ಆಳ್ವಾಸ್‌ನ ‘ಬಿ’ ತಂಡಗಳು ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದು ಗಮನ ಸೆಳೆದವು.


ಸೆಮಿಫೈನಲ್ ಪಂದ್ಯಗಳಲ್ಲಿ ಆಳ್ವಾಸ್ ಬಾಲಕರ ‘ಎ’ ತಂಡವು ಚಾಮರಾಜನಗರ ಜಿಲ್ಲಾ ತಂಡವನ್ನು ಹಾಗೂ ‘ಬಿ’ ತಂಡವು ರಾಜರಾಜೇಶ್ವರಿ ನಗರ ತಂಡವನ್ನು ಸೋಲಿಸಿತು. ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ‘ಎ’ ತಂಡವು ಮೂಡಿಗೆರೆ ತಂಡವನ್ನು ಮತ್ತು ‘ಬಿ’ ತಂಡವು ರಾಜರಾಜೇಶ್ವರಿ ನಗರ ತಂಡವನ್ನು ನೇರ ಸೆಟ್‌ಗಳಲ್ಲಿ ಮಣಿಸಿ ಫೈನಲ್ ಪ್ರವೇಶಿಸಿತು. ಫೈನಲ್ ಹಂತದ ಎರಡೂ ವಿಭಾಗಗಳಲ್ಲಿ ಆಳ್ವಾಸ್‌ನ ನಾಲ್ಕೂ ತಂಡಗಳು ಪರಸ್ಪರ ಹೋರಾಟ ನಡೆಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡವು.


ವಿಜೇತ ಹಾಗೂ ರನ್ನರ್ಸ್ ಅಪ್ ತಂಡಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top