ಬೆಂಗಳೂರು: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅವರ ಸಹಯೋಗದಲ್ಲಿ, ನಿಮ್ಹಾನ್ಸ್‌ನ ಜನ ಆರೋಗ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಪ್ರದೀಪ್ ಬಿ.ಎಸ್. ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್‌ಗಳಿಗೆ ಮೂರು ದಿನಗಳ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಬೆಂಗಳೂರಿನ ಬನಶಂಕರಿಯ ವಿದ್ಯಾರ್ಥಿ ನಿಲಯದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಾಗಾರದಲ್ಲಿ ಹಾಸ್ಟೆಲ್ ವಾರ್ಡನ್‌ಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸಾಮರ್ಥ್ಯ ವೃದ್ಧಿಗೆ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳೊಂದಿಗೆ ಪರಿಣಾಮಕಾರಿ ಸಂವಹನ ಬೆಳೆಸುವ ಕೌಶಲ್ಯಗಳ ಕುರಿತು ತರಬೇತಿ ನೀಡಲಾಯಿತು. ನಿಮ್ಹಾನ್ಸ್‌ನ ಜೀವನ ಕೌಶಲ್ಯ ಕಾರ್ಯಕ್ರಮದ ಶ್ರೀವಿದ್ಯಾ, ಸ್ವಾತಿ ಸಹನ ಸೇರಿದಂತೆ ಪರಿಣಿತರ ತಂಡ ಸಂವಾದಾತ್ಮಕ ಕಲಿಕೆ, ಗುಂಪು ಚಟುವಟಿಕೆಗಳು, ಕೇಸ್ ಸ್ಟಡಿಗಳು ಹಾಗೂ ಕ್ಷೇತ್ರ ಅನುಭವ ಹಂಚಿಕೆಯ ಮೂಲಕ ತರಬೇತಿ ನೀಡಿತು.
ಇದೇ ಸಂದರ್ಭದಲ್ಲಿ ಜೀವನ ಕೌಶಲ್ಯ ಹಾಗೂ ಯುವಸ್ಪಂದನ ಯೋಜನೆಯ ಬೆಂಗಳೂರು ವಿಭಾಗದ ಕ್ಷೇತ್ರ ಸಂಪರ್ಕಾಧಿಕಾರಿ ಪೂಜಾ ಸಿದ್ದಿ ಅವರು ಯುವಸ್ಪಂದನ ಅರಿವು ಕಾರ್ಯಕ್ರಮ ನಡೆಸಿಕೊಟ್ಟು, ಯುವ ಸಮುದಾಯದ ಮಾನಸಿಕ ಆರೋಗ್ಯ, ಸಹಾಯ ಪಡೆಯುವ ಮಾರ್ಗಗಳು, ಭಾವನಾತ್ಮಕ ನಿಯಂತ್ರಣ ಮತ್ತು ಒತ್ತಡ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಮೂರು ದಿನಗಳ ಈ ತರಬೇತಿಯ ಮುಖ್ಯ ಉದ್ದೇಶ ಹಾಸ್ಟೆಲ್ ವಾರ್ಡನ್‌ಗಳ ಸೇವಾ ಸಮರ್ಥತೆಯನ್ನು ಹೆಚ್ಚಿಸುವುದು ಹಾಗೂ ವಿದ್ಯಾರ್ಥಿಗಳ ಸವಾಲುಗಳನ್ನು ಮನೋವೈಜ್ಞಾನಿಕ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳುವಲ್ಲಿ ಸಹಾನುಭೂತಿಯನ್ನು ಬೆಳೆಸುವುದಾಗಿತ್ತು. ತರಬೇತಿ ಅಂತ್ಯದಲ್ಲಿ ಭಾಗವಹಿಸಿದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಯುತ ಪ್ರದೀಪ್ ಬಿ.ಎಸ್., ಬೆಂಗಳೂರು ಜಿಲ್ಲಾ ಅಧಿಕಾರಿಯಾದ ಶ್ರೀಯುತ ವಿನೋದ್, ಯುವಸ್ಪಂದನ ಯೋಜನೆಯ ರಾಜ್ಯ ಸಂಪರ್ಕಾಧಿಕಾರಿ ಶ್ರೀಯುತ ಶ್ರೀನಿವಾಸ್ ಪ್ರಸಾದ್ ಹಾಗೂ ನಿಮ್ಹಾನ್ಸ್‌ನ ಜನ ಆರೋಗ್ಯ ವಿಭಾಗದ ಯುವಸ್ಪಂದನ ಮತ್ತು ಜೀವನ ಕೌಶಲ್ಯ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpg)
