ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಮತ್ತು ಯೂತ್ ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 164ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಜ.12ರಂದು ಬೆಳಗ್ಗೆ 10ಕ್ಕೆ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕ ವೇದವ್ಯಾಸ ಕಾಮತ್.ಡಿ., ಮಂಗಳಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ರಹ್ಮಣ್ಯ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವ ಸಾಧಕರಾದ ವಿಶ್ವಕಪ್ ವಿಜೇತ ಭಾರತೀಯ ಮಹಿಳಾ ಕಬಡ್ಡಿ ತಂಡದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ, ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ವಿಶ್ವ ದಾಖಲೆಯ ವಿಧುಷಿ ದೀಕ್ಷಾ.ಎಸ್. ಮತ್ತು ರಾಷ್ಟ್ರಪತಿ ರೋವರ್ಸ್ ಅವಾರ್ಡ್ ವಿಜೇತ ಪ್ರೀತೇಶ್ ಇವರುಗಳನ್ನು ಸನ್ಮಾನಿಸಲಾಗುವುದೆಂದು ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


