ಪರೀಕ್ಷಾ ಪೂರ್ವ ಸಿದ್ಧತೆ: ಫಿಲೋಮಿನಾ ಪಿ.ಯು. ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Upayuktha
0

 



ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ರಕ್ಷಕ–ಶಿಕ್ಷಕ ಸಂಘದ ಆಶ್ರಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ಸಿದ್ಧತೆಯ ಕುರಿತು ಮಾಹಿತಿ ಹಾಗೂ ಸಮಾಲೋಚನಾ ಕಾರ್ಯಗಾರವನ್ನು ಜನವರಿ ೧೭ ಮತ್ತು ೨೪ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗಳ ತಯಾರಿಯಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿ ಹಾಗೂ ಕರ್ತವ್ಯಗಳ ಕುರಿತು ಈ ಕಾರ್ಯಗಾರದಲ್ಲಿ ಚರ್ಚಿಸಲಾಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದ ಮಹತ್ವದ ಘಟ್ಟವಾಗಿದ್ದು, ಅವರ ಯಶಸ್ಸಿನಲ್ಲಿ ಪೋಷಕರ ಪಾತ್ರ ಅತ್ಯಂತ ಮುಖ್ಯವೆಂದು ಹೇಳಿದರು. ಪೋಷಕರು ಮಕ್ಕಳ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು. ಪರೀಕ್ಷಾ ತಯಾರಿಯ ಸಮಯದಲ್ಲಿ ಮಕ್ಕಳಿಗೆ ಸಾತ್ವಿಕ ಆಹಾರ ಒದಗಿಸುವುದು ಹಾಗೂ ಮನೆಯಲ್ಲಿ ಅನುಕೂಲಕರ ವಾತಾವರಣ ನಿರ್ಮಿಸುವುದು ಪೋಷಕರ ಕರ್ತವ್ಯವಾಗಿರುತ್ತದೆ ಎಂದರು.


ವಿದ್ಯಾರ್ಥಿಗಳು ಆಸಕ್ತಿಯಿಂದ ಹಾಗೂ ಶ್ರಮಪಟ್ಟು ಅಧ್ಯಯನ ಮಾಡಬೇಕು. ಇಂದಿನ ಪರಿಶ್ರಮವೇ ಭವಿಷ್ಯದ ಬದುಕಿಗೆ ಭದ್ರವಾದ ಅಡಿಪಾಯವಾಗುತ್ತದೆ. ಪರೀಕ್ಷೆಗೆ ಮುನ್ನ ನಡೆಸಬೇಕಾದ ಸಿದ್ಧತೆಗಳು ಹಾಗೂ ಪೋಷಕರು ವಿದ್ಯಾರ್ಥಿಗಳತ್ತ ನೀಡಬೇಕಾದ ಗಮನದ ಕುರಿತು ಅವರು ವಿವರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ದ್ವಿತೀಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು, ಅವರ ಹೆತ್ತವರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ರಕ್ಷಕ–ಶಿಕ್ಷಕ ಸಂಘದ ನಿರ್ದೇಶಕ ಸಂಜಯ್ ಎಸ್. ಸ್ವಾಗತಿಸಿದರು. ಅಶ್ವಿನಿ ಕೆ. ವಂದಿಸಿದರು. ಉಪನ್ಯಾಸಕಿ ಉಷಾ ಎ. ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top