ರಥಸಪ್ತಮಿ: ವಿವೇಕಾನಂದ ಪಿಯು ಕಾಲೇಜಿನಲ್ಲಿ 108 ಸಾಮೂಹಿಕ ಸೂರ್ಯ ನಮಸ್ಕಾರ

Upayuktha
0

 



ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರ ಸಹಯೋಗದಲ್ಲಿ ರಥಸಪ್ತಮಿ ಪ್ರಯುಕ್ತ “ಸಾಮೂಹಿಕ ೧೦೮ ಸೂರ್ಯ ನಮಸ್ಕಾರ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಜನವರಿ 25ರ ಭಾನುವಾರ ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ಮುಂಭಾಗದಲ್ಲಿ ನಡೆಯಲಿದೆ.


“ಸಂಸ್ಕಾರ – ಸಂಘಟನೆ – ಸೇವೆ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪರೋಪಕಾರಾರ್ಥಮ್ ಇದಂ ಶರೀರಂ ಎಂಬ ಚಿಂತನೆಯ ಆಧಾರದಲ್ಲಿ ಯೋಗ ಶಿಕ್ಷಣವನ್ನು ಸಮಾಜಮುಖಿಯಾಗಿ ವಿಸ್ತರಿಸುತ್ತಾ ಬಂದಿದೆ. ಯೋಗಾಭ್ಯಾಸದ ಜೊತೆಗೆ ಶಿಸ್ತು, ಸಮಯಪಾಲನೆ, ಧನಾತ್ಮಕ ಚಿಂತನೆ, ಕ್ರಿಯಾಶೀಲ ಜೀವನಶೈಲಿ ಹಾಗೂ ಸಂಸ್ಕಾರಯುತ ಕುಟುಂಬಗಳ ನಿರ್ಮಾಣದ ಮೂಲಕ ಆರೋಗ್ಯಯುತ ಸಮಾಜ ರೂಪಿಸುವಲ್ಲಿ ಸಮಿತಿ ಮಹತ್ವದ ಪಾತ್ರ ವಹಿಸಿದೆ.


ಶತಮಾನಕ್ಕೂ ಅಧಿಕ ಇತಿಹಾಸ ಹೊಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘವು ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಭಾರತೀಯ ಪರಂಪರೆ ಹಾಗೂ ಮೌಲ್ಯಾಧಾರಿತ ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಂಯುಕ್ತವಾಗಿ ಆಯೋಜಿಸಲಾದ ಈ ಕಾರ್ಯಕ್ರಮದ ಮೂಲಕ ಸೂರ್ಯಾರಾಧನೆಯ ವೈಜ್ಞಾನಿಕ ಮಹತ್ವವನ್ನು ಜನಸಾಮಾನ್ಯರಿಗೆ ಪರಿಚಯಿಸುವುದು, ದೈಹಿಕ–ಮಾನಸಿಕ ಆರೋಗ್ಯವನ್ನು ಉತ್ತೇಜಿಸುವುದು ಹಾಗೂ ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವುದು ಉದ್ದೇಶವಾಗಿದೆ.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಯೋಗಬಂಧುಗಳು, ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು ೭೦೦ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ನೂರಾರು ಯೋಗಬಂಧುಗಳು ಒಂದೇ ವೇದಿಕೆಯಲ್ಲಿ ೧೦೮ ಸೂರ್ಯ ನಮಸ್ಕಾರಗಳನ್ನು ನೆರವೇರಿಸುವ ಮೂಲಕ ಆರೋಗ್ಯ, ಶಿಸ್ತು ಮತ್ತು ಸಂಸ್ಕಾರದ ಸಂದೇಶವನ್ನು ಸಾರಲಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top