ವಿದ್ಯಾರ್ಥಿಗಳಿಗೆ ಶುಚಿತ್ವ ಅರಿವು ಅತ್ಯಗತ್ಯ: ಪ್ರೇಮಲತಾ

Upayuktha
0


ಸುರತ್ಕಲ್: ವೈಯಕ್ತಿಕ ಶುಚಿತ್ವ ಮತ್ತು ಸಾಮಾಜಿಕ ಶುಚಿತ್ವ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಶುಚಿತ್ವದ ಅರಿವು ಮೂಡಿಸುವುದು ಅಗತ್ಯವೆಂದು ಸುರತ್ಕಲ್ ಅಂಗರಗುಂಡಿ ಕ್ಲಸ್ಟರ್‌ನ ಸಂಪನ್ಮೂಲ ಅಧಿಕಾರಿ ಪ್ರೇಮಲತಾ ಹೇಳಿದರು. ಶಾಲೆಗಳಲ್ಲಿ ಕಸ ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡುವ ಕಾರ್ಯಕ್ಕೆ ಶಿಕ್ಷಣ ಇಲಾಖೆ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ಕಾರ್ಯಯೋಜನೆ ರೂಪಿಸಲಾಗಿದೆ ಎಂದರು.


ಅವರು ಕುಳಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಫಿಶರೀಸ್) ಯ ವನಶ್ರೀ ಇಕೋ ಕ್ಲಬ್ ಆಶ್ರಯದಲ್ಲಿ ಆಯೋಜಿಸಿದ್ದ “ಸಾವಯವ ಗೊಬ್ಬರ ತಯಾರಿ ಹಾಗೂ ಸ್ವಚ್ಛತೆಯತ್ತ ಹೆಜ್ಜೆ” ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕಾರ್ಯಾಗಾರದಲ್ಲಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟ ಸುರತ್ಕಲ್ ನಾಗರಿಕ ಸಲಹಾ ಸಮಿತಿಯ ಕಾರ್ಯದರ್ಶಿ ಸತೀಶ್ ಸದಾನಂದ್ ಮಾತನಾಡಿ, ಇಂದಿನ ದಿನಗಳಲ್ಲಿ ಕಸದ ನಿರ್ವಹಣೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಈ ಕುರಿತು ಅರಿವು ಅಗತ್ಯವೆಂದರು. ಒಣಕಸ ಮತ್ತು ಹಸಿಕಸಗಳನ್ನು ಸರಿಯಾಗಿ ವಿಂಗಡಿಸಿದರೆ ಹಸಿಕಸದಿಂದ ಸಾವಯವ ಗೊಬ್ಬರ ತಯಾರಿಸಬಹುದು ಎಂದು ವಿವರಿಸಿದರು.


ಮುಖ್ಯ ಅತಿಥಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಇಕೋ ಕ್ಲಬ್ ಮೂಲಕ ಪರಿಸರ ಸ್ನೇಹಿ ಹಾಗೂ ಸ್ವಚ್ಛ ಶಾಲಾ ಆವರಣವನ್ನು ನಿರ್ಮಿಸಬಹುದಾಗಿದೆ ಎಂದು ಹೇಳಿದರು.


ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ಇಕೋ ಕ್ಲಬ್ ಶಿಕ್ಷಕ ಸಂಯೋಜಕಿ ನೀತಾ ತಂತ್ರಿ ವಂದಿಸಿದರು. ಹಿರಿಯ ಶಿಕ್ಷಕಿಯರಾದ ಸುಕೇಶಿನಿ, ಸಿಂತಿಯಾ, ರೂಪ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top