ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ರಾಮಕೃಷ್ಣ–ವಿವೇಕಾನಂದ ಭಾವ ಪ್ರಚಾರ ಪರಿಷತ್ ಸಂಸ್ಥೆಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸಿದ ರಾಜ್ಯಮಟ್ಟದ ‘ವಿವೇಕ ವಿದ್ಯಾರ್ಥಿ’ ಪರೀಕ್ಷೆಯಲ್ಲಿ ಸುದಾನ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.
ಈ ಪರೀಕ್ಷೆಯಲ್ಲಿ ಎಂಟನೇ ತರಗತಿಯ ಧೃತಿ ಎಚ್. ರೈ, ಆನ್ಸೆಲ್ ಪ್ರಿನ್ಸಿಟಾ ಗೊನ್ಸಾಲ್ವಿಸ್, ಒಂಭತ್ತನೇ ತರಗತಿಯ ನವನೀತ್ ವೈ.ಕೆ., ಯಶಸ್ವಿ ಎನ್., ಹಾಗೂ ಹತ್ತನೇ ತರಗತಿಯ ಭವಿಷ್ಯ್, ಯಕ್ಷಿತ್ ಮತ್ತು ಪೃಥ್ವಿ ಪಿ. ಅವರು ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.
ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್ ಹಾಗೂ ಮುಖ್ಯ ಶಿಕ್ಷಕಿ ಶೋಭಾನಾಗರಾಜ್ ಅವರು ಅಭಿನಂದಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸಹಶಿಕ್ಷಕಿ ಪವಿತ್ರಾ ಜಿ. ಅವರು ಮಾರ್ಗದರ್ಶನ ನೀಡಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


