ಏತಡ್ಕ: ದುರ್ಗಾಪರಮೇಶ್ವರಿ ಭಜನಾ ಮಂದಿರದ 14ನೇ ಪ್ರತಿಷ್ಠಾ ಮಹೋತ್ಸವ

Upayuktha
0


ಏತಡ್ಕ: ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ 14ನೇ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಮಂಗಳವಾರ ಶ್ರದ್ಧಾಭಕ್ತಿ, ಸಾಂಸ್ಕೃತಿಕ ವೈಭವದೊಂದಿಗೆ ಯಶಸ್ವಿಯಾಗಿ ನೆರವೇರಿತು.


ಮಹೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆಯನ್ನು ವೇದಮೂರ್ತಿ ಪಳ್ಳತ್ತಡ್ಕ ಶಿವಶಂಕರ ಭಟ್ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ಭಕ್ತರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಭರಿತ ವಾತಾವರಣವನ್ನು ನಿರ್ಮಿಸಿದರು. ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ ಭಕ್ತರು ಕೃತಾರ್ಥರಾದರು.


ಕಾರ್ಯಕ್ರಮದ ಪ್ರಮುಖ ಘಟ್ಟವಾಗಿ ದುರ್ಗಾ ಫ್ರೆಂಡ್ಸ್ ಕ್ಲಬ್‌ನ ಲಾಂಛನವನ್ನು ಶ್ರೀ ದುರ್ಗಾಪರಮೇಶ್ವರಿ ಭಜನಾ ಸಂಘದ ಅಧ್ಯಕ್ಷ ಬಾಲಕೃಷ್ಣ ಕೆ.ಕೆ. ಕುಂಡಾಪು ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.


ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭವ್ಯ ರಂಗಮಂದಿರದಲ್ಲಿ ಶಾರದಾ ಆರ್ಟ್ಸ್ ತಂಡದವರಿಂದ “ಕಥೆ ಎಡ್ಡೆ ಉಂಡು” ನಾಟಕ ಪ್ರದರ್ಶನಗೊಂಡಿತು. ಗಡಿನಾಡ ಕಲಾನಿಧಿ ಕೃಷ್ಣ ಜಿ. ಮಂಜೇಶ್ವರ ಅವರ ಸಾರಥ್ಯದಲ್ಲಿ, ಜೆ.ಪಿ. ತೂಮಿನಾಡು ರಚಿಸಿ ನಿರ್ದೇಶಿಸಿದ ಈ ನಾಟಕವು ಸಮಾಜಸ್ಪರ್ಶಿ ವಿಷಯವಸ್ತುವಿನ ಮೂಲಕ ಪ್ರೇಕ್ಷಕರ ಮನಸೂರೆಗೊಂಡು ಅಪಾರ ಪ್ರಶಂಸೆ ಹಾಗೂ ಭರ್ಜರಿ ಸ್ಪಂದನೆ ಪಡೆಯಿತು.


ಧಾರ್ಮಿಕ ವಿಧಿವಿಧಾನಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮನ್ವಯದೊಂದಿಗೆ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಸುವ್ಯವಸ್ಥಿತವಾಗಿ ಹಾಗೂ ಸ್ಮರಣೀಯವಾಗಿ ಸಂಪನ್ನಗೊಂಡಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top