ಉನ್ನತ ಶಿಕ್ಷಣ ಕ್ಷೇತ್ರಕ್ಕೆ ದಾರಿದೀಪವಾದ ಬಜೆಟ್

Upayuktha
0


ಭಾರತದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ದಾರಿದೀಪವಾದ ಮತ್ತು ಆತ್ಮವಿಶ್ವಾಸವನ್ನು ಒದಗಿಸುವ ಬಜೆಟ್ ಇದಾಗಿದೆ. ಸಮಗ್ರ ದಾಖಲಾತಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ನಿರಂತರ ಗಮನವನ್ನು ಹರಿಸಿರುವುದು ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್, ರಾಷ್ಟ್ರೀಯ ಕ್ರೆಡಿಟ್ ಫ್ರೇಮ್ ವರ್ಕ್, ಮಲ್ಟಿಪಲ್ ಎಂಟ್ರಿ- ಮಲ್ಟಿಪಲ್ ಎಕ್ಸಿಟ್ ವ್ಯವಸ್ಥೆಯಂತಹ ರಚನಾತ್ಮಕ ಸುಧಾರಣೆಗಳು ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಅಡಿಪಾಯವಾಗಲಿವೆ. ಫಲಿತಾಂಶ ಆಧಾರಿತ ಶಿಕ್ಷಣ, ಉದ್ಯಮ- ಶೈಕ್ಷಣಿಕ ಸಹಯೋಗ, ದ್ವೈವಾರ್ಷಿಕ ಪ್ರವೇಶಗಳು, ಕೌಶಲ್ಯಧಾರಿತ ಪದವಿ ಕಾರ್ಯಕ್ರಮಗಳು ಉನ್ನತ ಶಿಕ್ಷಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನಕ್ಕೆ ಸಹಕಾರಿಯಾಗಲಿವೆ. ಸಂಶೋಧನಾ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ನೀಡಿರುವುದು ಭಾರತದ ಜಾಗತಿಕ ಶೈಕ್ಷಣಿಕ ಆಕಾಂಕ್ಷೆಗಳನ್ನು ಸೂಚಿಸುತ್ತದೆ. ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಈ ಬಾರಿಯ ಬಜೆಟ್ ಆ ಕ್ಷೇತ್ರದಲ್ಲಿ ಸಾಕಷ್ಟು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ.




- ಡಾ. ನವ್ಯ ಜಿ.ಎಸ್.

ಪ್ರಾಧ್ಯಾಪಕರು,

ಬರ್ಲಿನ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಇನೋವೇಷನ್,

ಜರ್ಮನಿ


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top