ಬೆಂಗಳೂರು: ಪೂಜ್ಯ ಪುತ್ತಿಗೆ ಶ್ರೀಪಾದರು ಮುಂದಿನ ಶನಿವಾರ (ಫೆಬ್ರವರಿ 21) ಬೆಂಗಳೂರು ನಗರಕ್ಕೆ ಪುರಪ್ರವೇಶ ಮಾಡುವ ಹಿನ್ನಲೆಯಲ್ಲಿ ಶ್ರೀಗಳ ಅಭಿನಂದನಾ ಸಮಾರಂಭವನ್ನು ಸ್ವಾಗತ ಸಮಿತಿಯವರು ಬಸವನ ಗುಡಿಯ ಗೋವರ್ಧನ ಕ್ಷೇತ್ರದಲ್ಲಿ ಹಮ್ಮಿಕೊಂಡಿರುತ್ತಾರೆ.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ. ಸಿ ಮೋಹನ್, ಬೆಂಗಳೂರು ಗ್ರಾಮೀಣ ಸಂಸದ ಡಾ. ಮಂಜುನಾಥ್ ಎನ್, ವಿದ್ವಾಂಸರಾದ ಡಾ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ, ಬಿಜೆಪಿ ಮುಖಂಡರಾದ ಎನ್ ಆರ್ ರಮೇಶ್, ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಸಗೋಡು ಜಯಸಿಂಹ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಎಸ್, ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಡಾ. ಎಂ ಆರ್ ವಿ ಪ್ರಸಾದ್, ಖ್ಯಾತ ಚಿತ್ರ ನಟ ಮಾಸ್ಟರ್ ಆನಂದ್ ಇವರುಗಳು ಭಾಗವಹಿಸಲಿದ್ದಾರೆ. ಬೆಂಗಳೂರು ಪೂರ್ಣಪ್ರಜ್ಞ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ವೀರನಾರಾಯಣ ಪಾಂಡುರಂಗಿಯವರು ಶುಭಾಶಂಸನೆಗೈಯಲಿದ್ದಾರೆ.
ಸಾಯಂಕಾಲ 5 ಗಂಟೆಗೆ ಪೂಜ್ಯ ಶ್ರೀಗಳನ್ನು ಗುರು ನರಸಿಂಹ ಸಭಾ ಭವನದಿಂದ ಭವ್ಯ ಮೆರವಣಿಗೆಯ ಮೂಲಕ ಬಸವನಗುಡಿಯ ಶ್ರೀ ಪುತ್ತಿಗೆ ಮಠದ ಗೋವರ್ಧನ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಗುವುದು. ತದನಂತರ 7ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಭಜನಮಂಡಳಿಯ ಮಾತೆಯರಿಂದ ಭಗವದ್ಗೀತಾ ಪಾರಾಯಣವೂ ನಡೆಯಲಿದೆ ಮತ್ತು ಶ್ರೀಗಳಿಂದ ಭಕ್ತರಿಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷಾ ಸಮಾರಂಭವೂ ನಡೆಯಲಿದೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಸದ್ಭಕ್ತರೆಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಮಿತಿಯ ಅಧ್ಯಕ್ಷರಾದ ಶ್ರೀರಾಮಚಂದ್ರ ಉಪಾಧ್ಯಾಯರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


