ವಿಕಸಿತ ಭಾರತಕ್ಕೆ ಭದ್ರ ತಳಹದಿ: ನಳಿನ್ ಕುಮಾರ್ ಕಟೀಲ್

Upayuktha
0


ಮಂಗಳೂರು: ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಬಜೆಟ್ ಮಂಡನೆಯಾಗಿದೆ. ತೆಂಗಿನಕಾಯಿ, ಕೋಕೋ ಬೆಳೆಗಳಿಗೆ ಆರ್ಥಿಕ ಬೆಂಬಲ ನೀಡುವ ಮೂಲಕ ಕೃಷಿ ಅಭಿವೃದ್ಧಿಗೆ ಉತ್ತೇಜಿಸಿರುವುದು ಕರಾವಳಿ ಭಾಗದ ಕೃಷಿಕರಿಗೆ ವರದಾನವಾಗಲಿದೆ.


ಮೀನುಗಾರಿಕಾ ಕ್ಷೇತ್ರವನ್ನು ಬಲಪಡಿಸಲು ಸುಂಕ ವಿನಾಯಿತಿ, ಸಮುದ್ರ ಉತ್ಪನ್ನಗಳ ರಫ್ತು ಹೆಚ್ಚಳ ಘೋಷಿಸಿರುವುದು ಸ್ವಾಗತಾರ್ಹ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಆಮೆ ಹಾದಿಗಳನ್ನು ಅಭಿವೃದ್ಧಿ ಪಡಿಸುವ ಯೋಜನೆ ಘೋಷಿಸಿದ್ದು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಲಿದೆ. ಬಡವರ, ಮಧ್ಯಮ ವರ್ಗದವರ, ಮಹಿಳೆಯರ, ಯುವಕರ ಹಿತ ಕಾಯುವ ಸರ್ವ ಸ್ಪರ್ಶಿ ಬಜೆಟ್ ಇದು.




- ನಳಿನ್‌ಕುಮಾರ್ ಕಟೀಲ್,

ಮಾಜಿ ಸಂಸದರು, ದ.ಕ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top