ಉಡುಪಿ: ಖ್ಯಾತ ಚಲನಚಿತ್ರ ನಟ ಶ್ರೀ ವಿಜಯ ರಾಘವೇಂದ್ರ ಅವರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅವರನ್ನು ಮಠದ ಪರವಾಗಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ದರ್ಶನದ ನಂತರ ಅವರು ಪರ್ಯಾಯ ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಪಾದರು ಅವರಿಗೆ ಅನುಗ್ರಹ ಮಂತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.
ಭೇಟಿಯ ಸಂದರ್ಭದಲ್ಲೇ ನಟ ವಿಜಯ ರಾಘವೇಂದ್ರ ಅವರು ಉಡುಪಿ ಶ್ರೀ ಕೃಷ್ಣಮಠದ ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಶ್ಲಾಘಿಸಿದರು. ಮಠದ ಅಧಿಕಾರಿಗಳು, ಸೇವಕರು ಹಾಗೂ ಭಕ್ತರು ಈ ಸಂದರ್ಭ ಉಪಸ್ಥಿತರಿದ್ದು, ಕಾರ್ಯಕ್ರಮ ಸೌಹಾರ್ದಪೂರ್ಣ ವಾತಾವರಣದಲ್ಲಿ ನೆರವೇರಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

