ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಇಪ್ಪತ್ತೈದು ವರ್ಷಗಳನ್ನು ಪೂರ್ಣಗೊಳಿಸಿ ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ಮುನ್ನಡೆಯುತ್ತಿರುವ ಸವಿನೆನಪಿನಲ್ಲಿ 2026-27ನೇ ಸಾಲಿನಿಂದ ಸರ್ಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಇದರನ್ವಯ ಸರಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದರೆ ಅಂತಹವರಿಗೆ ಅತ್ಯುತ್ತಮ ಗುಣಮಟ್ಟದ ಪದವಿ ಪೂರ್ವ ವಿಜ್ಞಾನ ಅಥವ ವಾಣಿಜ್ಯ ಶಾಸ್ತ್ರ ಶಿಕ್ಷಣವನ್ನು ಒದಗಿಸಿಕೊಡಲಾಗುತ್ತದೆ. ಈ ಸೌಲಭ್ಯವು ಪ್ರತಿ ವರ್ಷವೂ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಈಗಾಗಲೇ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ರೂಪದಲ್ಲಿ ಸಾಕಷ್ಟು ಆರ್ಥಿಕ ನೆರವನ್ನು ಒದಗಿಸಿಕೊಡುತ್ತಿದೆ. 2010ರಿಂದಲೇ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುತ್ತಾ ಬಂದಿರುವ ಅಂಬಿಕಾ ಸಂಸ್ಥೆ ಕಳೆದ ಕೆಲವು ವರ್ಷಗಳಿಂದ ಪ್ರತಿವರ್ಷವೂ ಒಂದು ಕೋಟಿ ರೂಪಾಯಿಗಳಿಗಿಂತಲೂ ಅಧಿಕ ಹಣದ ನೆರವನ್ನು ವಿದ್ಯಾರ್ಥಿಗಳಿಗೆ ಕೊಡಮಾಡುತ್ತಿದೆ. ಸಹಸ್ರಾರು ವಿದ್ಯಾರ್ಥಿಗಳು ಈಗಾಗಲೇ ಈ ಆರ್ಥಿಕ ನೆರವಿನ ಪ್ರಯೋಜನಗಳನ್ನು ಪಡೆದುಕೊಂಡು ತಮ್ಮ ಬದುಕನ್ನು ರೂಪಿಸಿಕೊಂಡಿರುವುದು ಉಲ್ಲೇಖಾರ್ಹ. ಇದರೊಂದಿಗೆ ಇದೀಗ ಸರ್ಕಾರಿ ಶಾಲೆಗಳಲ್ಲಿನ ಪ್ರತಿಭಾನ್ವಿತ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಹಾಗೂ ಕೋಚಿಂಗ್ ಶುಲ್ಕ ಒಳಗೊಂಡಂತೆ ಉಚಿತ ಶಿಕ್ಷಣವನ್ನು ನೀಡುವ ಯೋಜನೆಗೆ ಇದೀಗ ಅಡಯಿಟ್ಟಿದೆ.
ಉಚಿತ ಶಿಕ್ಷಣದ ಅರ್ಹತೆ: ಎಸ್‍ಎಸ್‍ಎಲ್‍ಸಿ ಬೋರ್ಡ್ ಪರೀಕ್ಷೆ ಪೂರ್ಣಗೊಂಡ ನಂತರ ಅಂಬಿಕಾ ಸಂಸ್ಥೆಯಲ್ಲಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಒದಗಿಸಲಾಗುವುದು.
ಆಸಕ್ತ ವಿದ್ಯಾರ್ಥಿಗಳು https://forms.gle/wK8ft2469PfV4NAdA ಈ ಗೂಗಲ್ ಲಿಂಕ್ ಮೂಲಕ ಮಾರ್ಚ್ 5ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಎಪ್ರಿಲ್ 4ರಂದು ಬೆಳಗ್ಗೆ 9.30 ಗಂಟೆಗೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ: 9741481600, 9448835488
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


