ವಿವೇಕಾನಂದ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ

Upayuktha
0

ಕ್ರೀಡೆಯು ಏಕಾಗ್ರತೆಗೆ ಸಹಕಾರಿ: ರಮೇಶ್ ಎಚ್




ಪುತ್ತೂರು: ಕ್ರೀಡೆ ಎನ್ನುವುದು ಕೇವಲ ದೇಹದ ಆರೋಗ್ಯವನ್ನು ಕಾಪಾಡುವುದು ಮಾತ್ರವಲ್ಲ ಬದಲಾಗಿ  ನಮ್ಮ ಮಾನಸಿಕ ಸದೃಡತೆಗೂ ಸಹಕಾರಿ. ಅಲ್ಲದೇ ಏಕಾಗ್ರತೆಯನ್ನು ಕಾಪಾಡಿಕೊಳ್ಳಲು ಕ್ರೀಡೆ ಬಲುಮುಖ್ಯ. ಈಗಿನ ಕಾಲದಲ್ಲಿ ಕ್ರೀಡೆಗೆ ಉತ್ತಮ ಸ್ಥಾನಮಾನ ಇದೆ. ಕ್ರೀಡೆಯಲ್ಲಿದ್ದವರು ಶೈಕ್ಷಣಿಕ ಕ್ಷೇತ್ರದಲ್ಲಿಯೂ ಉತ್ತಮ ಅಂಕಗಳನ್ನು ಪಡೆಯುತ್ತಾರೆ.ಹಾಗಾಗಿ ಇಂತಹ ಕ್ರೀಡಾಕೂಟದಲ್ಲಿ ನಿರಂತರವಾಗಿ ಭಾಗವಹಿಸಿ ಎಂದು ರಾಷ್ಟ್ರೀಯ ಮಟ್ಟದ ವಾಲಿಬಾಲ್ ಕ್ರೀಡಾಪಟು ಹಾಗೂ ಎಸ್‌ಡಿಎಂ (ಸ್ವಾಯತ್ತ) ಕಾಲೇಜು ಉಜಿರೆ ಇಲ್ಲಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಮೇಶ್ ಎಚ್ ಹೇಳಿದರು.


ಇವರು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ, ದೈಹಿಕ ಶಿಕ್ಷಣ ವಿಭಾಗ ಮತ್ತು ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ನಡೆದ 2025-26ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ, ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ, ಕ್ರೀಡಾಕೂಟವು ಯಶಸ್ವಿಯಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.


ವೇದಿಕೆಯಲ್ಲಿ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಎಚ್.ಜಿ. ಶ್ರೀಧರ್, ಐಕ್ಯೂಎಸಿ ಘಟಕದ ಸಂಯೋಜಕಿ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ, ಆಡಳಿತ ಮಂಡಳಿಯ ವಿಶೇಷ ಅಧಿಕಾರಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್ ವಿ.ಎಸ್ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಆಯೋಸಿದ ಫುಡ್ ಸ್ಟಾಲ್ ಗಳನ್ನು ಉದ್ಘಾಟಿಸಲಾಯಿತು. ಕ್ರೀಡಾ ಕಾರ್ಯದರ್ಶಿ ರಿತೇಶ್ ಅಮ್ಮುಂಜ ಹಾಗೂ ತಂಡದವರಿಂದ ಕ್ರೀಡಾಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಹಂಪನ ಕೆ.ಪಿ. ಸ್ವಾಗತಿಸಿ, ಕಾರ್ಯದರ್ಶಿ ಸುಮನ ವಂದಿಸಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್. ನಿಡ್ಪಳ್ಳಿ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಜ್ಯೋತಿ ಕುಮಾರಿ ಪಿ.ಎಸ್ ಹಾಗೂ ಯತೀಶ್ ಬಾರ್ತಿಕುಮೇರ್ ಸಹಕರಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top