ವಿಕಸಿತ ಭಾರತದತ್ತ ಇನ್ನೊಂದು ಧೃಡ ಹೆಜ್ಜೆ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Upayuktha
0


ಬೆಂಗಳೂರು: ಕೇಂದ್ರದ ವಿತ್ತ ಮಂತ್ರಿ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 9 ನೇ ಬಜೆಟ್ ಮೋದಿಯವರ ಕನಸಿನ ವಿಕಸಿತ ಭಾರತದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ವಿಶ್ಲೇಷಿಸಿದ್ದಾರೆ.


ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದ ಜನತಯ ಮನಸ್ಸಿನಲ್ಲಿ ಆರ್ಥಿಕ ವಿಶ್ವಾಸ ತುಂಬಿರುವ ಸ್ವಾಗತಾರ್ಹ ಬಜೆಟ್. ದೀರ್ಘಕಾಲೀನ ಆರ್ಥಿಕ ಗುರಿಯನ್ನು ಮುಟ್ಟಲು ಅಗತ್ಯವಿರುವ ಅಲ್ಪ ಕಾಲಿನ ಯೋಜನೆಗಳೊಂದಿಗೆ ಸಂತುಲನೆಯ ಸಮದೃಷ್ಟಿಯ ಸಂತುಲಿತ ಬಜೆಟ್ ಇದು ಎಂದು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.


ಯಾವುದೇ ಸಮುದಾಯವನ್ನಾಗಲಿ, ಸಂಸ್ಥೆಯನ್ನಾಗಲಿ, ವರ್ಗವನ್ನಾಗಲಿ  ತುಷ್ಟಿಕರಿಸುವ ಹಿಂದಿನ ಸರಕಾರಗಳ ಯೋಚನೆಗಳಿಗೆ ವಿರುದ್ಧವಾಗಿ, ಜಾಗತಿಕ ಆರ್ಥಿಕ ತಲ್ಲಣವನ್ನು ಗಮನದಲ್ಲಿರಿಸಿ ನಮ್ಮ ದೇಶದ ಜನತೆಯ ಭವಿಷ್ಯದ ಹಿತವನ್ನು ಕಾಪಾಡಲು ಅಗತ್ಯವಿರುವ ಯೋಚನೆ ಮತ್ತು ಯೋಜನೆಗಳನ್ನು ಹೊಂದಿರುವ ಮುಂಗಡಪತ್ರ ಇದು. ಜನತೆಯ ಆಶೋತ್ತರಗಳನ್ನು ಸಾಧಿಸಬಲ್ಲ ಯೋಜನೆಗಳು ಮತ್ತು ತುಷ್ಟೀಕರಣದ ಮಾನಸಿಕತೆಯಿಂದ ಹೊರಬಂದು ಜನಸಾಮಾನ್ಯರನ್ನು ಕೇಂದ್ರವಾಗಿರಿಸಿರುವ ಬಜೆಟ್ ಅಭಿನಂದನೀಯ ಎಂದು ತಿಳಿಸಿದ್ದಾರೆ. ಮೂಲಭೂತ ಸೌಕರ್ಯಗಳು, ಕೃಷಿ, ಉದ್ಯೋಗ, ಸೆಮಿ ಕಂಡಕ್ಟರ್, ಪ್ರೆಶಿಯಸ್ ಲೋಹಗಳು, ಡೇಟಾ ಕೇಂದ್ರಗಳು ಮುಂತಾದ ಕ್ಷೇತ್ರಗಳಲ್ಲಿ ಸ್ವಾವಲಂಬನೆಯ ಯೋಜನೆಗಳ ಅಭಿವೃದ್ಧಿಗೆ ಪೂರಕ ಬಜೆಟ್ ಎಂದು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top