ಬೆಂಗಳೂರು: ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಮ್ಮ ಸಂತಾಪ ಸೂಚನಾ ಸಂದೇಶದಲ್ಲಿ ತಿಳಿಸಿದ್ದಾರೆ.
ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ತಮ್ಮದೇ ಆದ ಛಾಪು ಮೂಡಿಸಿದ್ದರು. ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಆಗಿದ್ದ ಹೆಗ್ಡೆ ಅವರು ಪ್ರಾಮಾಣಿಕ ಸೇವೆ ಸಲ್ಲಿಕೆಗೆ ಹೆಸರುವಾಸಿಯಾಗಿದ್ದರು. ಶಾಸಕರಾಗಿ ಕಾರ್ಯನಿರ್ವಹಿಸಿದ ತಮ್ಮ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಮಹತ್ವದ ಕೊಡುಗೆ ನೀಡಿದ್ದರು. ಸ್ಥಳೀಯ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರು ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು ಎಂದು ತಿಳಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬ, ಅಭಿಮಾನಿಗಳಿಗೆ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಪುತ್ತಿಗೆ ಶ್ರೀಗಳ ಸಂತಾಪ:
ಬೈಂದೂರು ಮಾಜಿ ಶಾಸಕರಾದ ಸಮಾಜ ಸೇವಕರಾದ ಬಿ.ಅಪ್ಪಣ್ಣ ಹೆಗ್ಡೆಯವರ ನಿಧನ ವಾರ್ತೆ ತಿಳಿದು ಖೇದವಾಯಿತು. ಶ್ರೀಮಠದ ಅಭಿಮಾನಿಗಳಾಗಿದ್ದ ಅವರು ನಮ್ಮ ಅನೇಕ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣದೇವರಲ್ಲಿ ಪ್ರಾರ್ಥಿಸುತ್ತೇವೆ.
- ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಪುತ್ತಿಗೆ ಮಠ, ಉಡುಪಿ
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

