ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಬಿ.ಎ (SEP) ಪಠ್ಯಕ್ರಮ ಕಾರ್ಯಾಗಾರ

Upayuktha
0


ಮಂಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಮತ್ತು ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗವು ‘ಫೋರಮ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಟೀಚರ್ಸ್’ (FOBMAT) ಸಹಯೋಗದೊಂದಿಗೆ ಬಿ.ಬಿ.ಎ (SEP) ನಾಲ್ಕನೇ ಸೆಮಿಸ್ಟರ್  ಪಠ್ಯಕ್ರಮದ ಕುರಿತು ಒಂದು ದಿನದ ಕಾರ್ಯಾಗಾರವನ್ನು  ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಿತ್ತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವ ಡಾ. ಗಣೇಶ್ ಸಂಜೀವ್ ಅವರು, "ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯಕ್ರಮವು ಉದ್ಯಮದ ಅಗತ್ಯತೆಗಳಿಗೆ ಪೂರಕವಾಗಿರಬೇಕು. ಶೈಕ್ಷಣಿಕ ಸಹಯೋಗ ಮತ್ತು ನಿರಂತರ ಕಲಿಕೆಯಿಂದ ಮಾತ್ರ ಗುಣಮಟ್ಟದ ಶಿಕ್ಷಣ ಸಾಧ್ಯ," ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫರಾಜ್ ಜೆ. ಹಾಸಿಂ ಮಾತನಾಡಿ, ಶಿಕ್ಷಕರ ಜ್ಞಾನಾರ್ಜನೆಗೆ ಇಂತಹ ಕಾರ್ಯಾಗಾರಗಳು ದಾರಿದೀಪ ಎಂದರು. FOBMAT ಅಧ್ಯಕ್ಷ ಡಾ. ಚಂದ್ರಶೇಖರ ಕೆ. ಅವರು ಪಠ್ಯಕ್ರಮದ ಹೊಸ ಬದಲಾವಣೆಗಳ ಕುರಿತು ಪೀಠಿಕೆ ನೀಡಿದರು. ವೇದಿಕೆಯಲ್ಲಿ FOBMAT ಕಾರ್ಯದರ್ಶಿ ಪ್ರೊ. ನಂದಕಿಶೋರ್ ಕೆ., ಪಿ.ಎ ಪ್ರಥಮ ದರ್ಜೆ ಕಾಲೇಜಿನ IQAC ಸಂಯೋಜಕಿ ವಾಣಿಶ್ರೀ ವೈ. ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಶಿಜಿನ್ ಉಪಸ್ಥಿತರಿದ್ದರು.


ವ್ಯವಸ್ಥಾಪನಾ ವಿಭಾಗದ ಮುಖ್ಯಸ್ಥೆ ದೀಪ್ತಿ ಉದ್ಯಾವರ್ ಸ್ವಾಗತಿಸಿದರು. ವಿವಿಧ ಕಾಲೇಜುಗಳ ಅಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಬಗ್ಗೆ ಚರ್ಚಿಸಿದರು. ಸಂಪನ್ಮೂಲ ವ್ಯಕ್ತಿಗಳಿಗೆ ಮತ್ತು ಭಾಗವಹಿಸಿದ ಪ್ರತಿನಿಧಿಗಳಿಗೆ ಪ್ರಮಾಣಪತ್ರ ವಿತರಿಸುವ ಮೂಲಕ ಕಾರ್ಯಕ್ರಮ ಮುಕ್ತಾಯವಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top