ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಸಂದರ್ಭದಲ್ಲಿ, ಉಡುಪಿ ಭೀಮನಕಟ್ಟೆ ಮಠದ ಪೀಠಾಧೀಶರಾದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರು ಅವರು ತಮ್ಮ ಶಿಷ್ಯರೊಂದಿಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅವರು ಭೀಮನಕಟ್ಟೆ ಶ್ರೀಪಾದರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವ ಸಲ್ಲಿಸಿದರು. ಮಠದ ಸಂಪ್ರದಾಯದಂತೆ ನಡೆದ ಈ ಭೇಟಿಯು ಪರಸ್ಪರ ಧಾರ್ಮಿಕ ಬಾಂಧವ್ಯ ಹಾಗೂ ದೈವಿಕ ಸೌಹಾರ್ದತೆಯನ್ನು ಪ್ರತಿಬಿಂಬಿಸಿತು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ್ ಕುಮಾರ್ ಸರಳತ್ತಾಯ ಹಾಗೂ ಶೀರೂರು ಮಠದ ಪಾರುಪತ್ಯೇಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದು, ಕಾರ್ಯಕ್ರಮದ ವ್ಯವಸ್ಥೆ ಹಾಗೂ ಸಂಯೋಜನೆಯಲ್ಲಿ ಪಾಲ್ಗೊಂಡರು.
ಭೇಟಿಯ ಸಂದರ್ಭದಲ್ಲಿಆಶೀರ್ವಚನ ನೀಡಿದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರು, ಮಠ ಪರಂಪರೆ, ಧರ್ಮಸಂರಕ್ಷಣೆ ಹಾಗೂ ಸಮಾಜದಲ್ಲಿ ಅಧ್ಯಾತ್ಮಿಕ ಮೌಲ್ಯಗಳ ಅಗತ್ಯತೆ ಕುರಿತು ಸಂದೇಶ ನೀಡಿದರು. ಈ ಭಕ್ತಿಪೂರ್ವಕ ಭೇಟಿಯು ಮಠದ ವಾತಾವರಣವನ್ನು ಆಧ್ಯಾತ್ಮಿಕ ಶ್ರದ್ಧೆ ಹಾಗೂ ಉತ್ಸವದ ಸೊಬಗಿನಿಂದ ತುಂಬಿಸಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

