ಫೆ. 22ರಂದು ಹೇಮರೆಡ್ಡಿ ಮಲ್ಲಮ್ಮನವರ ನೂತನ ದೇವಸ್ಥಾನಕ್ಕೆ ಭೂಮಿ ಪೂಜೆ

Upayuktha
0


ಹುನಗುಂದ: ಪಟ್ಟಣದ ರೆಡ್ಡಿ ಸಮಗ್ರ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ನೂತನ ದೇವಸ್ಥಾನ ಕಟ್ಟಡದ ಭೂಮಿ ಪೂಜೆ ಸಮಾರಂಭವು ಫೆಬ್ರವರಿ 22ರಂದು ರವಿವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 50ರ ಹೊಂದಿಕೊಂಡಿರುವ ದಾದ್ದಿ ಎಚ್‌ಪಿ ಪೆಟ್ರೋಲ್ ಬಂಕ್ ಸಮೀಪದಲ್ಲಿರುವ ಸಮಾಜದ ಸ್ವಂತ ಜಾಗದಲ್ಲಿ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಎಂ. ಕಾಮಾ ತಿಳಿಸಿದ್ದಾರೆ.


ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೆಡ್ಡಿ ಸಮಗ್ರ ಅಭಿವೃದ್ಧಿ ಸಂಸ್ಥೆ 2018ರಲ್ಲಿ ಸ್ಥಾಪನೆಯಾಗಿ, ಸಮಾಜದ ಸ್ವಂತ ಜಾಗದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ದೇವಸ್ಥಾನ ನಿರ್ಮಿಸುವುದು ಅನೇಕ ವರ್ಷಗಳ ಕನಸಾಗಿತ್ತು. ಇದೀಗ ಸಮಾಜದ ಗಣ್ಯರ ಸಹಕಾರದಿಂದ ಆ ಕನಸು ನನಸಾಗಿದೆ ಎಂದು ಹೇಳಿದರು.


ಶಂಕರಪ್ಪ ಸಂಗಪ್ಪ ಬೆಳ್ಳಿಹಾಳ ಹಾಗೂ ಗಿರಿಜಾ ಶಂಕರಪ್ಪ ಬೆಳ್ಳಿಹಾಳ ಅವರು ಜಮೀನು ಖರೀದಿ ಹಾಗೂ ದೇವಸ್ಥಾನ ನಿರ್ಮಾಣಕ್ಕೆ ಧನಸಹಾಯ ನೀಡಿದ್ದು, ಜೊತೆಗೆ ಅನೇಕ ಸಮಾಜದ ಗಣ್ಯರು ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.


ಸಂಸ್ಥೆಯ ಉಪಾಧ್ಯಕ್ಷ ಮರಿಯಪ್ಪ ದೇವರೆಡ್ಡಿ ಮಾತನಾಡಿ, ಭೂಮಿ ಪೂಜೆ ಕಾರ್ಯಕ್ರಮಕ್ಕೆ ಎರೆಹೊಸಳ್ಳಿ ರೆಡ್ಡಿ ಪೀಠದ ವೇಮನಾನಂದ ಮಹಾಸ್ವಾಮಿಗಳು ನೇತೃತ್ವ ವಹಿಸಲಿದ್ದು, ನಂದವಾಡಗಿಯ ಮಹಾಂತಲಿಂಗ ಶಿವಾಚಾರ್ಯರು ಹಾಗೂ ಚಿತ್ರರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು.


ಕಾರ್ಯಕ್ರಮಕ್ಕೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೂಮಿ ಪೂಜೆ ಅಡಿಗಲ್ಲು ನೆರವೇರಿಸಲಿದ್ದಾರೆ. ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.


ಈ ಸಂದರ್ಭದಲ್ಲಿ ಮಾಜಿ ಸಂಸದರು, ಶಾಸಕರು, ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ರೆಡ್ಡಿ ಸಮಾಜದ ಹಲವಾರು ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿರಲಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಪರಶುರಾಮನಗೌಡ ಹಣಮಗೌಡ್ರ, ನಿರ್ದೇಶಕರು ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top