ವಳಚ್ಚಿಲ್ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Upayuktha
0


ಮಂಗಳೂರು: ಮಾನವ ಜೀವವನ್ನು ರಕ್ಷಿಸುವಲ್ಲಿ ರಕ್ತದಾನದ ಪಾತ್ರ ಮಹತ್ತರವಾಗಿದೆ. ರಕ್ತದಾನವು ರೋಗಿಗಳ ಪಾಲಿಗೆ ಸಂಜೀವಿನಿಯಾಗಿದೆ ಎಂದು ಅತ್ತಾವರ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಂಜಿತಾ ರಾವ್ ಹೇಳಿದರು.


ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ರಕ್ತದಾನ ಶಿಬಿರದಲ್ಲಿ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು.


ದೇಶದಲ್ಲಿ 5 ಕೋಟಿ ಯುನಿಟ್ ರಕ್ತದ ಅಗತ್ಯವಿದೆ. ಆದರೆ 2.5 ಕೋಟಿ ಯುನಿಟ್ ರಕ್ತದ ಕೊರತೆ ಇದೆ ಎಂದ ಅವರು, ರಕ್ತದಾನದ ಪ್ರಾಮುಖ್ಯತೆ ಮತ್ತು ಪ್ರಯೋಜನಗಳನ್ನು ವಿವರಿಸಿದರು.




ರಕ್ತದಾನದ ಮೂಲಕ ಉದ್ಘಾಟನೆ: 

ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಉದ್ಘಾಟಿಸಿದ ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್ ನಾಯಕ್ ಅವರು ಮಾತನಾಡಿ, ವಿದ್ಯಾದಾನದಂತೆ ರಕ್ತದಾನವು ಶ್ರೇಷ್ಠವಾದುದು. ಶಿಕ್ಷಣ ಮತ್ತು ಅರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆ ರಕ್ತದಾನ ಮಾಡುವಲ್ಲಿ ಹೆಗ್ಗಳಿಕೆ ಸಾಧಿಸಬೇಕು ಎಂದರು. 


ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್ ನಾಯಕ್, ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್. ನಾಯಕ್,  ಪ್ರಾಂಶುಪಾಲ ಡಾ. ಎನ್. ಕೆ. ವಿಜಯನ್ ಕರಿಪ್ಪಾಲ್, ಉಪ ಪ್ರಾಂಶುಪಾಲ (ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ, ಉಪ ಪ್ರಾಂಶುಪಾಲೆ (ಆಡಳಿತ) ಧೃತಿ ವಿ ಹೆಗ್ಡೆ, ಕಾರ್ಯಕ್ರಮ ನಿರ್ದೇಶಕ ಜಗದೀಶ್ ನಾಯ್ಕ್ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ದೀಪಾಲಿ ಶೆಲ್ಶಿಯ ಸಿಂಗ್ ಸ್ವಾಗತಿಸಿ, ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top