ಸುರತ್ಕಲ್: ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ಸಮಾಜದ ಪಾತ್ರ ಹಿರಿದಾಗಿದೆ. ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದರ ಜೊತೆಗೆ ಉತ್ತಮ ಸಂಸ್ಕಾರಗಳನ್ನು ತಿಳಿಸಿ ಕೊಡಬೇಕು. ಮಾದಕ ದ್ರವ್ಯ ವ್ಯಸನದ ಜಾಲಕ್ಕೆ ಸಿಲುಕಿ ನರಳುವ ಯುವ ಜನತೆಯನ್ನು ಎಚ್ಚರಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರಬೇಕು ಎಂದು ಯೆನೆಪೋಯ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಹಾಗೂ ಮನಶಾಸ್ತ್ರಜ್ಞ ಡಾ. ಮನು ಆನಂದ್ ನುಡಿದರು.
ಅವರು ಸುರತ್ಕಲ್ ರೋಟರಿ ಕ್ಲಬ್, ಸರಕಾರಿ ಪ್ರೌಢ ಶಾಲೆ ಸೂರಿಂಜೆಯ ಇಂಟರಾಕ್ಟ್ ಕ್ಲಬ್, ಸ್ಪಂದನ ಆಪ್ತ ಸಲಹಾ ಕೇಂದ್ರಗಳ ಸಹಯೋಗದಲ್ಲಿ ನಡೆದ ನಶಾ ಮುಕ್ತ ಸುರತ್ಕಲ್ ಅಭಿಯಾನದಲ್ಲಿ ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜದ ನಿರ್ಮಾಣದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸುರತ್ಕಲ್ ರೋಟರಿ ಕ್ಲಬ್ ನ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯತ್ತ ಗಮನ ನೀಡುವ ಮೂಲಕ ಉನ್ನತ ಬದುಕು ರೂಪಿಸಿಕೊಳ್ಳಬೇಕು ಎಂದರು.
ರೋಟರಿ ಸೇವಾ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದಿನ ಕಾಲ ಘಟ್ಟದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳ ವಿರುದ್ಧ ಜಾಗೃತಿ ಹೊಂದಿ ಹಿರಿಯರಿಗೂ ತಿಳಿಸಿ ಕೊಡಬೇಕು ಎಂದರು.
ಮುಖ್ಯ ಶಿಕ್ಷಕಿ ಸವಿತಾ ಗ. ನಾಯ್ಕ್ ಸ್ವಾಗತಿಸಿ ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರಗಳ ಕುರಿತು ಹೆಚ್ಚಿನ ಆಸಕ್ತಿ ತಾಳಲು ಏಕಾಗ್ರತೆ ಮುಖ್ಯವಾಗಿದ್ದು ಅರಿವಿನ ಕಾರ್ಯಕ್ರಮಗಳು ಜ್ಞಾನ ವರ್ಧನೆಗೆ ಪೂರಕವಾಗುತ್ತದೆ ಎಂದರು.
ಇಂಟರಾಕ್ಟ್ ಕ್ಲಬ್ ಕಾರ್ಯದರ್ಶಿ ಅನಿತಾ ವಂದಿಸಿದರು. ದುರ್ಗಾ ಕಾರ್ಯಕ್ರಮ ನಿರೂಪಿಸಿದರು. ಸುರತ್ಕಲ್ ರೋಟರಿಯ ಕಾರ್ಯದರ್ಶಿ ರಾಮ ಮೋಹನ್ ವೈ. ನಿಯೋಜಿತ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಶೀಲಾ ಶ್ರೀನಿವಾಸ್, ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಭೀಶಾಲ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

