ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ

Upayuktha
0


ಮಂಗಳೂರು: ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ಕೆನರಾ ಬ್ಯಾಂಕ್ ವತಿಯಿಂದ ಇ-ಹುಂಡಿಯನ್ನು (E Hundi) ಅಳವಡಿಸಲಾಯಿತು. ಮಂಗಳೂರು ವಲಯ ಮುಖ್ಯಸ್ಥರಾದ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ  ಸನತ್ ಕುಮಾರ್ ಶೆಟ್ಟಿ ಮತ್ತು ಶ್ರೀ ಹರಿನಾರಾಯಣದಾಸ ಅಸ್ರಣ್ಣ ಅವರು ಇದನ್ನು ಉದ್ಘಾಟಿಸಿದರು.


ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ. ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕಿನ ಉಪ ಮಹಾಪ್ರಬಂಧಕರುಗಳಾದ ಶ್ರೀಮತಿ ಲತಾ ಕುರುಪ್ ಮತ್ತು ಶ್ರೀಮತಿ ಎಲ್. ಆರ್. ವಿಜಯಶ್ರೀ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top