ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಸೋಮವಾರ ತೋರಣಮುಹೂರ್ತ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ಪೂರ್ವಾಹ್ನ ಒಂಭತ್ತು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಅಪರಾಹ್ನ ನಾಲ್ಕು ಗಂಟೆಯಿಂದ ನಾಂದಿಮಂಗಲ ಕಾರ್ಯಕ್ರಮ ನಡೆಯಿತು. ಪೂಜ್ಯ 105 ಕ್ಷಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


