ವಾತ್ಸಲ್ಯ ಮನೆ ಬದುಕಿನ ನೆಮ್ಮದಿಗೆ ಅರಮನೆ: ಹೇಮಾವತಿ ವೀ. ಹೆಗ್ಗಡೆ

Upayuktha
0

ವಾತ್ಸಲ್ಯ ಮನೆ ಹಸ್ತಾಂತರ



ಉಜಿರೆ: ವಾತ್ಸಲ್ಯ ಮನೆ ಬದುಕಿನ ನೆಮ್ಮದಿಗೆ ಅರಮನೆಯಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು.


ಅವರು ಗುರುವಾರ ಅರಸಿನಮಕ್ಕಿ ಗ್ರಾಮದ ಜಯಶ್ರೀ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ, ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ನೀಡಿ ಶುಭ ಹಾರೈಸಿದರು.


ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಅವರು ವೃದ್ಧಾಪ್ಯದಲ್ಲಿ ಹಿರಿಯರನ್ನು ಗೌರವಿಸಿ ಸೇವೆ ಮಾಡುತ್ತಾರೆ. ಒಬ್ಬಂಟಿಯಾಗಿರುವವರಿಗೆ ರಾಜ್ಯದೆಲ್ಲೆಡೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ “ವಾತ್ಸಲ್ಯ” ಮನೆ ನಿರ್ಮಿಸಿ ಕೊಡಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.


ಜ್ಞಾನವಿಕಾಸ ವಿಭಾಗದ ನಿರ್ದೇಶಕ ವಿಠಲ ಪೂಜಾರಿ, ಪ್ರಾದೇಶಿಕ ನಿರ್ದೇಶಕ ಜಯರಾಮ, ದಿನೇಶ್ ಪೂಜಾರಿ, ಯೋಜನಾಧಿಕಾರಿ ಯಶೋಧರ ಮೊದಲಾದವರು ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top