ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿವಿಲ್ ಡಿಫೆನ್ಸ್ (ಪೌರ ರಕ್ಷಣೆ)ವಿಭಾಗದ ಚೀಫ್ ವಾರ್ಡನ್ ಆಗಿ ಡಾ. ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಹೋಂ ಗಾರ್ಡ್ಸ್, ನಾಗರಿಕ ರಕ್ಷಣಾ ವಿಭಾಗದ ಕಮಾಂಡೆಂಟ್ ಜನರಲ್ ಅವರು ಫೆ.2ರಂದು ಈ ಆದೇಶ ಹೊರಡಿಸಿದ್ದಾರೆ.
ನಾಗರಿಕ ರಕ್ಷಣಾ ಕಾಯಿದೆ 1968ರ ಕಲಂ 5(1)ರ ಅನ್ವಯ ತಕ್ಷಣದಿಂದ ಅನ್ವಯಿಸಿ ಒಂದು ವರ್ಷದ ಅವಧಿಗೆ ಈ ನೇಮಕಾತಿ ಜಾರಿಯಲ್ಲಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಡಾ. ಮುರಲೀ ಮೋಹನ್ ಚೂಂತಾರು ಅವರು ದಂತ ವೈದ್ಯರಾಗಿದ್ದು, ಜಿಲ್ಲಾ ಹೋಮ್ ಗಾರ್ಡ್ಸ್ ಕಮಾಂಡೆಂಟ್ ಆಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

