ಡಾ. ಸುರೇಶ್ ನೆಗಳಗುಳಿಗೆ ‘ಕವಿ ಕಾವ್ಯ ವಿಭೂಷಣ–26’ ಪ್ರಶಸ್ತಿ

Upayuktha
0



ಕಾಸರಗೋಡು: ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ–ಕನ್ನಡ ಚುಟುಕು ಸಾಹಿತ್ಯ ಪರಿಷತ್ತುಯ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ “ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ–2026” ರಲ್ಲಿ ಮೇರು ಕವಿ, ಜನಪ್ರಿಯ ವೈದ್ಯ ಹಾಗೂ ಸಾಹಿತಿ ಡಾ. ಸುರೇಶ್ ನೆಗಳಗುಳಿ ಅವರಿಗೆ ಪ್ರತಿಷ್ಠಿತ ‘ಕವಿ ಕಾವ್ಯ ವಿಭೂಷಣ–26’ ಪ್ರಶಸ್ತಿ ಪ್ರದಾನ ಮಾಡಲಾಗುವುದು.


ಸಮ್ಮೇಳನವು ಫೆಬ್ರವರಿ 22, 2026 (ಭಾನುವಾರ) ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ ‘ಚುಟುಕು ಯುಗಾಚಾರ್ಯ ಎಂ.ಜಿ.ಆರ್. ಅರಸ್ ವೇದಿಕೆ’ಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ವಹಿಸಲಿದ್ದು, ಶ್ರೀಮದ್ ಎಡನೀರು ಶ್ರೀಗಳು ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ್ ಮಹಾಸ್ವಾಮಿ (ಗೋವಿನಾಳ) ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.


ಈ ವಿಷಯವನ್ನು ಕೇರಳ ರಾಜ್ಯ–ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸ್ಥಾಪಕ ಹಾಗೂ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಡಾ. ವೆಂಕಟ್ರಮಣ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಡಾ. ಸುರೇಶ್ ನೆಗಳಗುಳಿ ಅವರು ಕೊಪ್ಪ, ಆಳ್ವಾಸ್ ಆಯುರ್ವೇದ ಕಾಲೇಜು ಮೂಡುಬಿದಿರೆ, ಶೋರಾನೂರು, ಮಣಿಪಾಲ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸುಮಾರು 35 ವರ್ಷಗಳ ಕಾಲ ಪ್ರಾಚಾರ್ಯ, ಡೀನ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ಕಣಚೂರು ಆಯುರ್ವೇದ ಕಾಲೇಜಿನ ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಸಾಹಿತ್ಯ ಕ್ಷೇತ್ರದಲ್ಲಿ ಅವರು ಐದು ಗಜಲ್ ಸಂಕಲನಗಳು, ಭಾವಗೀತೆಗಳು, ಮುಕ್ತಕಗಳು ಸೇರಿದಂತೆ ಅನೇಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿರುವ ಗೌರವವೂ ಇವರದು. ‘ಬದಲಾಗದವರು’ ಚಲನಚಿತ್ರದ ಮೂಲಕ ನಟರಾಗಿಯೂ ಗುರುತಿಸಿಕೊಂಡಿರುವ ಅವರು, ವಿಶ್ವ ಆಯುರ್ವೇದ ರತ್ನ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳನ್ನು ಪಡೆದಿದ್ದಾರೆ.


ಇದಲ್ಲದೆ, ಜೇಸಿ, ರೋಟರಿ ಹಾಗೂ ಲಯನ್ಸ್ ಸಂಸ್ಥೆಗಳ ಮೂಲಕ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಡಾ. ನೆಗಳಗುಳಿ, ಚುಟುಕು ಸಾಹಿತ್ಯ ಪರಿಷತ್ತು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳಲ್ಲಿ ಸಕ್ರಿಯವಾಗಿ ಮುಂದಾಳತ್ವ ವಹಿಸಿಕೊಂಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top