ಕ್ಯಾನ್ಸರ್ ಬಗ್ಗೆ ಜನಜಾಗೃತಿಯಿಂದ ಆರಂಭಿಕ ಪತ್ತೆ, ಚಿಕಿತ್ಸೆ ಸಾಧ್ಯ: ಶಾಸಕ ಯಶ್ ಪಾಲ್ ಸುವರ್ಣ

Upayuktha
0


ಉಡುಪಿ: ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದು, ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚು. ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದಾಗ ಕ್ಯಾನ್ಸರ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಗ್ಗಿಸಿ ಆರೋಗ್ಯಯುಕ್ತ ಜೀವನವನ್ನು ನಮ್ಮದಾಗಿಸಿಕೊಳ್ಳಬಹುದು ಎಂದು ಶಾಸಕ ಯಶ್‍ಪಾಲ್ ಸುವರ್ಣ ಹೇಳಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಆದರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆದರ್ಶ ಗ್ರೂಪ್ ಆಫ್ ಇನ್‍ಸ್ಟಿಟ್ಯೂಟ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸಾಂಕ್ರಾಮಿಕ ರೋಗಗಳ ಘಟಕ ಎನ್‍ಸಿಡಿ ಉಡುಪಿ,  ಜಿಲ್ಲಾ ಆಸ್ಪತ್ರೆ ಎನ್‍ಸಿಡಿ ವಿಭಾಗ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಉಡುಪಿ ಕಾಲೇಜ್ ಆಫ್ ನಸಿರ್ಂಗ್, ಸಿಎಸ್‍ಐ ಲೊಂಬಾರ್ಡ ಮೆಮೋರಿಯಲ್ ಕಾಲೇಜ್ ಆಫ್ ನಸಿರ್ಂಗ್, ನ್ಯೂ ಸಿಟಿ ಕಾಲೇಜ್ ಆಫ್ ನಸಿರ್ಂಗ್ ಉಡುಪಿ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಜಿಲ್ಲೆಯು ಆರೋಗ್ಯ ಸೇವೆಯಲ್ಲಿಯೂ ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಜಿಲ್ಲೆಯ ವೈದ್ಯರು ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ. ತಮ್ಮ ಕರ್ತವ್ಯದ ಜೊತೆಗೆ ಸಮಾಜ ಸೇವೆಯಲ್ಲಿ ನಿರತರಾಗಿರುವ ವೈದ್ಯಾಧಿಕಾರಿಗಳು ಅಸಾಂಕ್ರಾಮಿಕ ರೋಗಗಳ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಜನರೂ ಕೂಡಾ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪೆÇೀಷಕಾಂಶಯುಕ್ತ ಆಹಾರ ಸೇವನೆ ಮತ್ತು ದಿನನಿತ್ಯ ಕನಿಷ್ಟ 2 ಗಂಟೆ ವ್ಯಾಯಾಮ ಮಾಡುವ ಜೊತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದ ಅವರು, ನೂತನ ಜಿಲ್ಲಾಸ್ಪತ್ರೆಯ ಕಾಮಗಾರಿಗಳು ಶೇ.70 ರಷ್ಟು ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಆಸ್ಪತ್ರೆಯು ಸಾರ್ವಜನಿಕರಿಗೆ ಮುಕ್ತವಾದಲ್ಲಿ ಜಿಲ್ಲೆಯ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಲಿದೆ ಎಂದರು.


ಎಂಸಿಎಚ್ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ಕವಿತಾ ಹಾಗೂ ಆದರ್ಶ ಆಸ್ಪತ್ರೆ ಕ್ಯಾನ್ಸರ್ ತಜ್ಞ ಡಾ.ಅನಂತ ಎಸ್.ಮಠದ್ ಕ್ಯಾನ್ಸರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.


ಈ ಸಂದರ್ಭದಲ್ಲಿ ಕೀಮೋ ಚಿಕಿತ್ಸೆ ಫಲಾನುಭವಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು. 


ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ ವಾಸುದೇವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಆದರ್ಶ ಆಸ್ಪತ್ರೆ ಮುಖ್ಯಸ್ಥ ಡಾ. ಜಿ ಎಸ್ ಚಂದ್ರಶೇಖರ್, ಫುಡ್ ಫಾರ್ ದ ಹಂಗ್ರಿ ಫೌಂಡೇಶನ್ ನ ನಿಧಿ, ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್, ಕಾರ್ಯದರ್ಶಿ ಡಾ. ಮಾನಸ ಈ.ಆರ್ ಉಪಸ್ಥಿತರಿದ್ದರು. 


ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಚಂದ್ರಕಲಾ ನಿರೂಪಿಸಿ, ಶಶಿಧರ್ ಹೆಚ್ ವಂದಿಸಿದರು. 


ಕಾರ್ಯಕ್ರಮದ ನಂತರ ಜಿಲ್ಲಾ ಆಸ್ಪತ್ರೆ ಆವರಣದಿಂದ ಬ್ರಹ್ಮಗಿರಿ ಸರ್ಕಲ್ ಸುತ್ತುವರೆದು ಪುನಃ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸಮಾಪನಗೊಂಡ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್ ಬಲೂನ್ ಹಾರಿ ಬಿಡುವುದರ ಮೂಲಕ ಚಾಲನೆ ನೀಡಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top