ಶಿಕ್ಷಣವೆಂದರೆ ವ್ಯಕ್ತಿತ್ವ ನಿರ್ಮಾಣ: ಜಿ. ಎಲ್. ತ್ರಿಪುರಾಂತಕ

Upayuktha
0


ಮಂಗಳೂರು: ಕಷ್ಟದ ಹಾದಿ ಬದುಕಿನಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡುತ್ತದೆ. ಸಮಸ್ಯೆಗಳೇ ವ್ಯಕ್ತಿತ್ವ ನಿರ್ಮಾಣ ಮಾಡಲು ಸಹಾಯಕವಾಗುತ್ತವೆ ಎಂದು ರಾಮಕೃಷ್ಣ ಮಿಷನ್ ಬಾಲಕಾಶ್ರಮದ ನಿರ್ವಾಹಕ ಸ್ವಾಮಿಯುಗೇಶಾನಂದಜಿ ಸಲಹೆ ನೀಡಿದರು.


ನಗರದ ವಿಶ್ವವಿದ್ಯಾನಿಲಯಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನಕೇಂದ್ರ ಹಾಗೂ ವಿಶ್ವವಿದ್ಯಾನಿಲಯಕಾಲೇಜು ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ ಕುರಿತ ಸರಣಿ ಉಪನ್ಯಾಸ ʼವಿವೇಕವಾಣಿʼಯ 52ನೇಕಾರ್ಯಕ್ರಮ 'ವ್ಯಕ್ತಿತ್ವದಿಂದ ನಾಯಕತ್ವದತ್ತ ವಿವೇಕಾನಂದರ ಪಥʼ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಆಧುನಿಕತಂತ್ರಜ್ಞಾನದ ಬಳಕೆ ಹೆಚ್ಚಾಗುತ್ತಿರುವ ಪರಿಣಾಮ ಮನುಷ್ಯತನ್ನ ಬುದ್ಧಿಶಕ್ತಿಯನ್ನೇ ಕಳೆದುಕೊಳ್ಳುತ್ತಿದ್ದಾನೆ. ಇಂದಿನ ತಲೆಮಾರು ಸೋಮಾರಿತನ ಮೈಗೂಡಿಸಿಕೊಳ್ಳುತ್ತಿರುವುದರಿಂದ ಮನುಷ್ಯನಲ್ಲಿಅಡಗಿರುವ ಸಾಮಥ್ರ್ಯ ಬಳಕೆಯಾಗದೇ ನಶಿಸಿಹೋಗುತ್ತಿದೆ ಎಂದು ಇತ್ತೀಚಿನ ಅಧ್ಯಯನದ ವರದಿಯನ್ನು ಉಲ್ಲೇಖಿಸಿ ಕಳವಳ ವ್ಯಕ್ತಪಡಿಸಿದರು.


ಪುತ್ತೂರು ಜೆಎಸ್ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಜಿ. ಎಲ್. ತ್ರಿಪುರಾಂತಕ, ಯುವಜನಾಂಗ ತಮ್ಮನ್ನು ತಾವು ಅರ್ಥ ಮಾಡಿಕೊಳ್ಳುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ದೇಶದ ಎಲ್ಲಾ ನಾಗರಿಕರಲ್ಲಿ ನಾಯಕತ್ವ ಗುಣ ಇದ್ದು ಅದನ್ನು ಜಾಗೃತಿಗೊಳಿಸುವ ಕಾರ್ಯ ನಡೆಯಬೇಕಿದೆ. ಇಂದಿನ ಯುವಜನಾಂಗ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ವಿದ್ಯಾವಂತರೆಂದರೆ ಕೇವಲ ಅಕ್ಷರಜ್ಞಾನ ಪಡೆಯುವುದಲ್ಲ. ಬದಲಾಗಿ ಸಮಾಜದ ಏಳಿಗೆಗೆ ಶ್ರಮಿಸುವ ಸಾಮಥ್ರ್ಯವಿರುವ ನಾಯಕತ್ವಗುಣ ಬೆಳೆಸಿಕೊಳ್ಳುವುದೇ ಆಗಿದೆ ಎಂದು ತಿಳಿಸಿದರು.


ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ಸ್ವಾಮಿ ವಿವೇಕಾನಂದರ ಜೀವನ ಸಾಧನೆಯನ್ನು ಅರಿತುಕೊಂಡರೆ ಸಾಕು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುವುದರೊಂದಿಗೆ ಉತ್ತಮ ನಾಯಕತ್ವ ಗುಣವೂ ಬೆಳೆಯುತ್ತದೆ. ಸಮಾಜದ ಬೆಳವಣಿಗೆಗಳಿಗೆ ಕಣ್ಣು, ಕಿವಿಯಾಗಿ ಅಧ್ಯಯನ ಮಾಡುವ ಮನೋಭಾವ ರೂಢಿಸಿಕೊಂಡು, ವೈಚಾರಿಕತೆ ಬೆಳೆಸಿಕೊಳ್ಳದಿದ್ದರೆ ಯುವಜನಾಂಗವನ್ನು ರಾಜಕಾರಣಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.


ಮಂಗಳೂರು ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಚಂದ್ರು ಹೆಗ್ಡೆ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಪರಿಷತ್‍ಉಪನಿರ್ದೇಶಕ ಪ್ರೊ. ಜಯವಂತ ನಾಯಕ್ ವಂದಿಸಿದರು. ಇದೇ ವೇಳೆ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಮಹದೇಶ ಕೆ. ಸಿ., ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿಗೌಡಎಸ್. ಸೇರಿದಂತೆಕಾಲೇಜಿನ ನಾನಾ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top