ವಿವೇಕಾನಂದ ಕಾಲೇಜಿನಲ್ಲಿ ದತ್ತಿನಿಧಿ ಕಾರ್ಯಕ್ರಮ

Upayuktha
0


ಪುತ್ತೂರು: ಈಗಿನ ಕಾಲದ ವಿದ್ಯಾರ್ಥಿಗಳು ಸಂಸ್ಕಾರಯುತ ವಿದ್ಯೆಯನ್ನು ಕಲಿಯುವುದು ಅತ್ಯವಶ್ಯಕವಾಗಿದೆ. ಇಂತಹ ಶಿಕ್ಷಣಕ್ಕೆ ಉಪನಿಷತ್ ಮತ್ತು ವೇದಗಳು ಪೂರಕವಾಗಿದೆ. ಇವುಗಳಲ್ಲಿ ನಮ್ಮ ದಿನನಿತ್ಯದ ಬದುಕಿಗೆ ಅಗತ್ಯವಿರುವ ಸಾಕಷ್ಟು ವಿಷಯಗಳು ಲಭ್ಯವಿರುತ್ತದೆ ಎಂದು ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇಲ್ಲಿನ ಹಿರಿಯ ವಿದ್ಯಾರ್ಥಿ ಕಾರ್ತಿಕೇಯ.ಸಿ ನುಡಿದರು. 


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ವಿಜ್ಞಾನ ಸಂಘ ಮತ್ತು ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ನಡೆದ 2008 ನೇ ಸಾಲಿನ ಬಿಎಸ್‌ಸಿ ವಿಭಾಗದ ವಿದ್ಯಾರ್ಥಿವೇತನ ದತ್ತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. 


ವಿದ್ಯಾರ್ಥಿಗಳು ದತ್ತಿ ನಿಧಿಯನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಪಡೆದು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಹಾಗೂ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತರಬೇಕು ಎಂದು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ 5 ವಿದ್ಯಾರ್ಥಿಗಳಿಗೆ ದತ್ತಿನಿಧಿಯನ್ನು ನೀಡಲಾಯಿತು.                               


ವೇದಿಕೆಯಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಸ್ವಾಗತಿಸಿ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸೌಮಿತ್ರ ವಂದಿಸಿ, ವಿದ್ಯಾರ್ಥಿನಿ ದಿಶಾ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top