ಬೆಂಗಳೂರು: ಬಿ.ಎಂ.ಎಸ್. ಮಹಿಳಾ ಮಹಾವಿದ್ಯಾಲಯ, ಬಸವನಗುಡಿ ವತಿಯಿಂದ ‘ಜಾನಪದ ಜಾತ್ರೆ 2026– ಜನಪದ ಆಶಯಗಳ ಹುಡುಕಾಟ’ ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆಬ್ರವರಿ 4, 2026ರಂದು ಬೆಳಿಗ್ಗೆ 11:30ಕ್ಕೆ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.
ಈ ಜಾನಪದ ಜಾತ್ರೆ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದ್ದು, ಇಂದಿನ ಯುವಪೀಳಿಗೆಗೆ ಜಾನಪದ ಸಂಸ್ಕೃತಿಯ ಸೊಗಡು, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಸಹಭಾಗಿತ್ವದಲ್ಲಿ ಕಾಲೇಜಿನ ಸುತ್ತಮುತ್ತ ಮೆರವಣಿಗೆ, ಜಾನಪದ ವೇಷಭೂಷಣಗಳ ಪ್ರದರ್ಶನ, ಆಟ-ಊಟಗಳ ಮಳಿಗೆಗಳು ಹಾಗೂ ವಿದ್ಯಾರ್ಥಿನಿಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕಾರ್ಯಕ್ರಮವು ಬಿ.ಎಂ.ಎಸ್. ಶಿಕ್ಷಣ ದತ್ತಿಯ ದಾನಿಗಳು ಹಾಗೂ ಬಿ.ಎಂ.ಎಸ್. ಮಹಿಳಾ ಮಹಾವಿದ್ಯಾಲಯದ ಅಧ್ಯಕ್ಷರಾದ ಡಾ. ಬಿ. ಎಸ್. ರಾಗಿಣಿ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಹಾಸ್ಯ ಕಲಾವಿದರು ಮತ್ತು ಕನ್ನಡ ವಿದ್ವಾಂಸರಾದ ಪ್ರೊ. ಕೃಷ್ಣೇಗೌಡರು ಹಾಗೂ ಸಂಗೀತ ನಿರ್ದೇಶಕರು ಮತ್ತು ಜೀ ಕನ್ನಡ ‘ಸರಿಗಮಪ’ ಖ್ಯಾತಿಯ ಗಾಯಕರಾದ ಶ್ರೀ ಕಂಬದ ರಂಗಯ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

