ಕಾಸರಗೋಡು: ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಗ್ರಂಥಾಲಯದಲ್ಲಿ ಕಾಸರಗೋಡಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಸಹಕಾರದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ಫೆ.22ರಂದು ಬೆಳಗ್ಗೆ 10ರಿಂದ ಕನ್ನಡ ಭವನದಲ್ಲಿ ನಡೆಯಲಿದೆ. ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಶಿಬಿರ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಕಾಸರಗೋಡು ನಗರ ಸಭಾ ಕೌನ್ಸಿಲರ್ ಆಗಿರುವ ಶ್ರುತಿ ಅಶೋಕನಗರ, ಶಾರದಾ ಜೆ.ಪಿ. ನಗರ, ಸುಧಾರಾಣಿ ಶರತ್ ಅಣಂಗೂರು, ನೇತಾಜಿ ರೆಸಿಡೆನ್ಸಿ ವಲಯ ಅಧ್ಯಕ್ಷ ಶಶಿಕಾಂತ ಶೆಟ್ಟಿ, ಕಾಸರಗೋಡು ನಗರ ಸಭೆ ಮಾಜಿ ಕೌನ್ಸಿಲರ್ ವರಪ್ರಸಾದ್ ಕೋಟೆಕಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕನ್ನಡ ಭವನದ ಸಂಸ್ಥಾಪಕ ಡಾ. ಕೆ ವಾಮನ್ ರಾವ್ ಬೇಕಲ್, ಸಂಚಾಲಕಿ ಸಂಧ್ಯಾರಾಣಿ ಟೀಚರ್ ನೇತೃತ್ವ ವಹಿಸುವರು. ಈ ಸಂದರ್ಭದಲ್ಲಿ ಬೇವಿಂಜೆ ಶ್ರೀಧರ ಕಕ್ಕಿಲ್ಲಾಯ- ಸರೋಜಿನಿ ದೇವಿ ಕಕ್ಕಿಲ್ಲಾಯ ಸ್ಮರಣಾರ್ಥ ಸಾರ್ವಜನಿಕ ಉಚಿತ ವಾಚನಾಲಯದ ಲೋಕಾರ್ಪಣೆಯೂ ನಡೆಯಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


