ಪರ್ಕಳದಲ್ಲಿ ಆಯ್ದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ

Upayuktha
0



ಪರ್ಕಳ: ಜೆ ಸಿ ಐ ಪರ್ಕಳ, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ, ನೇತ್ರಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು ಹಾಗೂ ಶ್ರೀ ವಿಘ್ನೇಶ್ವರ ಸಭಾಭವನ, ಪರ್ಕಳ ಇವರ ಸಹಯೋಗದಲ್ಲಿ ನಡೆದ ಬ್ರಹತ್ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವು ಫೆಬ್ರವರಿ 16ರ ಸೋಮವಾರ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಶಿಬಿರದಲ್ಲಿ ಆಯ್ಕೆಯಾದ ಒಟ್ಟು 88 ಮಂದಿ ಫಲಾನುಭವಿಗಳಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ದೃಷ್ಟಿ ಸಮಸ್ಯೆ ನಿವಾರಣೆಯ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.


ಕಾರ್ಯಕ್ರಮದಲ್ಲಿ ಭರತ್ ಕೆ. ಕುಲಾಲ್ (ಅಧ್ಯಕ್ಷರು, ಜೆ ಸಿ ಐ ಪರ್ಕಳ), ಕೆ. ಪ್ರಕಾಶ್ ಶೆಣೈ (ಗೌರವಾಧ್ಯಕ್ಷರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ), ಡಾ. ಕೃಷ್ಣಪ್ರಸಾದ್ ಕೂಡ್ಲು (ಪ್ರಸಾದ್ ನೇತ್ರಾಲಯ) ಹಾಗೂ ರಮ್ಯ ನಾಯಕ್ (ಪೂರ್ವ ಅಧ್ಯಕ್ಷರು, ಜೆ ಸಿ ಐ ಪರ್ಕಳ) ಉಪಸ್ಥಿತರಿದ್ದರು.


ಅತಿಥಿಗಳು ಮಾತನಾಡಿ, ಇಂತಹ ಉಚಿತ ಆರೋಗ್ಯ ಸೇವಾ ಕಾರ್ಯಕ್ರಮಗಳು ಸಮಾಜದ ಆರೋಗ್ಯ ಸುಧಾರಣೆಗೆ ಮಹತ್ವದ ಕೊಡುಗೆ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಸಹ ಇಂತಹ ಜನಪರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top