ಫೆ.6ರಂದು ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Upayuktha
0

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮುಖ್ಯ ಅತಿಥಿ



ಸಾಂಕೇತಿಕ ಚಿತ್ರ


ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭವು ಫೆಬ್ರವರಿ 6ರಂದು ಜರುಗಲಿದೆ. ಬೆಳಿಗ್ಗೆ 10:30ಕ್ಕೆ ಕಾಲೇಜಿನ 'ಇಂದ್ರಪ್ರಸ್ಥ ಸಭಾಂಗಣ'ದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್ ಭಾಗವಹಿಸಲಿದ್ದಾರೆ. ಅವರು ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಆಶಯ ಭಾಷಣ ಪ್ರಸ್ತುತಪಡಿಸಲಿದ್ದಾರೆ. 


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿದ್ದ ಶ್ರೀ ರತ್ನವರ್ಮ ಹೆಗ್ಗಡೆಯವರ ದೂರದೃಷ್ಟಿಯ ಫಲವಾಗಿ 1966ರಲ್ಲಿ ಪ್ರಾರಂಭಗೊಂಡ ಎಸ್.ಡಿ.ಎಂ ಕಾಲೇಜು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೆ ನ್ಯಾಕ್ (NAAC) ಸಂಸ್ಥೆಯಿAದ ನಾಲ್ಕನೇ ಆವೃತ್ತಿಯಲ್ಲಿ ‘A++' ಶ್ರೇಣಿ ಪಡೆದಿರುತ್ತದೆ. ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ಸಂಶೋಧನೆ ಮತ್ತು ಕೌಶಲ್ಯಾಧಾರಿತ ಶಿಕ್ಷಣದಲ್ಲೂ ಕಾಲೇಜು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.


ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಲಿದ್ದಾರೆ. ಈ ಸಮಾರಂಭದಲ್ಲಿ ಒಟ್ಟು 297 ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಪದವಿ ಪ್ರಮಾಣ ಪತ್ರಗಳನ್ನು ಸ್ವೀಕರಿಸಲಿದ್ದು, ರ‍್ಯಾಂಕ್ ವಿಜೇತರಾದ ಪದವಿ ವಿಭಾಗದ 24 ಹಾಗೂ ಸ್ನಾತಕೋತ್ತರ ವಿಭಾಗದ 22 ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಗುವುದು. 


ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್. ಅವರು ಸಮಾರಂಭದಲ್ಲಿ ಉಪಸ್ಥಿತರಿರುವರು.


ಸಾಂಪ್ರದಾಯಿಕ ಶೈಲಿಯ ಭವ್ಯ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಚಾಲನೆ ಪಡೆಯಲಿದ್ದು, ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆಯೂ ಈ ಸಂದರ್ಭದಲ್ಲಿ ನೆರವೇರಲಿದೆ ಎಂದು ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top