ಪುತ್ತೂರು: ನಮ್ಮನ್ನು ಯೋಚಿಸುವಂತೆ ಮಾಡುವಲ್ಲಿ ರಸಾಯನಶಾಸ್ತ್ರ ಬಹು ಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಕ್ರಿಯೆ ಇಲ್ಲದೇ ಪ್ರತಿಕ್ರಿಯೆ ನಡೆಯದು. ಎಲ್ಲರೂ ಎಲ್ಲಾ ಕಾರ್ಯವನ್ನು ಮಾಡಬಹುದು, ಇದರಲ್ಲಿ ಹೆಣ್ಣು-ಗಂಡು ಎಂಬ ಬೇಧವಿಲ್ಲ. ಪದವಿ ಹಂತದ ಕಲಿಕೆಯು ಅಮೂಲ್ಯವಾದದ್ದು. ಆ ಸಮಯವನ್ನು ಹಾಳು ಮಾಡಬಾರದು. ಕೇವಲ ಅಂಕಗಳು ಮಾತ್ರ ಉದ್ಯೋಗ ಪಡೆಯಲು ಮಾನದಂಡವಲ್ಲ, ಅದರೊಂದಿಗೆ ಉತ್ತಮಜ್ಞಾವನ್ನು ಹೊಂದಿರುವುದು ಅವಶ್ಯಕ. ನಿಮಗೆ ಸಿಕ್ಕಿರುವ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ನಿಮ್ಮನ್ನು ನೀವು ಶಿಕ್ಷಣವಂತರನ್ನಾಗಿಸಿಕೊಳ್ಳಿ. ವಿದ್ಯಾರ್ಥಿಗಳು ದೊಡ್ಡ ಗುರಿಯನ್ನಿಟ್ಟುಕೊಂಡಷ್ಟು ಎತ್ತರದ ಸ್ಥಾನವನ್ನು ತಲುಪಲು ಸಾಧ್ಯಎಂದು ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸ್ ಪುತ್ತೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕ ಪ್ರಮೋದ್ ಭಾಸ್ಕರ್‌ಕುಮಾರ್ ತಿಳಿಸಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ರಸಾಯನಶಾಸ್ತ್ರ ಸಂಶೋಧನಾ ವಿಭಾಗ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಭಾರತೀಯ ರಸಾಯನಶಾಸ್ತ್ರದ ಪಿತಾಮಹ ಆಚಾರ್ಯ ಪ್ರಪುಲ್ಲಚಂದ್ರರಾಯ್ ಇವರ ಕುರಿತು ವಿಚಾರ ಮಂಡಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಶ್ರೀಕೃಷ್ಣ ಗಣರಾಜ್ ಭಟ್ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ವಿದ್ಯಾರ್ಥಿಗಳು ರಸಾಯನಶಾಸ್ತ್ರದ ಪಿತಾಮಹ ಆಚಾರ್ಯ ಪ್ರಪುಲ್ಲ ಚಂದ್ರರಾಯ್ ಇವರನ್ನುಆದರ್ಶ ವ್ಯಕ್ತಿಯನ್ನಾಗಿ ಪರಿಗಣಿಸಬೇಕು. ಪ್ರಮಾಣಕ್ಕಿಂತ ಗುಣಮಟ್ಟ ಮುಖ್ಯ. ಇದು ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಹಾಯಕ. ಈ ಕಾಲೇಜಿನಲ್ಲಿರುವ ಉತ್ತಮ ಸೌಲಭ್ಯವನ್ನು ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಎಂದು ಹೇಳಿದರು.
ವಿವೇಕಾನಂದ ಕಾಲೇಜಿನ ಪರಿಕ್ಷಾಂಗ ಕುಲಸಚಿವಡಾ. ಹೆಚ್ ಜಿ ಶ್ರೀಧರ್, ಸ್ನಾತಕೋತ್ತರ ರಾಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಮತ್ತು ಸಂಯೋಜಕಿ ಡಾ. ಹರ್ಷಿತಾ ಕೆ. ಆರ್ ಹಾಗೂ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ. ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಅನುಶ್ರೀ ಸ್ವಾಗತಿಸಿ, ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಅನುಶ್ರೀ ವಂದಿಸಿ, ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಗಗನ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


